Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿ ಭೇಟಿಯಾದ ಜಗದೀಶ್ ಶೆಟ್ಟರ್ : ಹಲವು ಬೇಡಿಕೆಗಳಿಗೆ ಮೋದಿ ಅಸ್ತು

Advertisement
ನವದೆಹಲಿ: ದೆಹಲಿಯಲ್ಲಿ ಇಂದು ಪ್ರಧಾನಿ ಮೋದಿ ಭೇಟಿಯಾದ ಸಂಸದ ಜಗದೀಶ್ ಶೆಟ್ಟರ್ ಅವರು ಬೆಳಗಾವಿ - ಬೆಂಗಳೂರು ವಂದೇ ಭಾರತ್ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಲು, ಬೆಳಗಾವಿ ಬಾರ್ ಅಸೋಸಿಯೇಷನ್ 150ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಲು ಆಹ್ವಾನಿಸಿದ್ದಾರೆ.

ಬೆಳಗಾವಿ ಬಾರ್ ಅಸೋಸಿಯೇಷನ್ ತನ್ನ ಅಸ್ತಿತ್ವದ 150 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ 150ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಮಾರಂಭಕ್ಕೆ ಬೆಳಗಾವಿ ಬಾರ್ ಅಸೋಸಿಯೇಷನ್ ಅಧ್ಯಕ್ಷರ ಮನವಿಯಂತೆ ಮುಖ್ಯ ಅತಿಥಿಗಳಾಗಿ ಆಗಮಿಸುವ ಕುರಿತು, ಪ್ರಧಾನ ಮಂತ್ರಿ ಮೋದಿ ಅವರನ್ನು ಇಂದು ನವದೆಹಲಿಯ ಸಂಸದ ಭವನದ ಕಚೇರಿಯಲ್ಲಿ ಭೇಟಿ ಮಾಡಿ, ವಿನಂತಿಸಲಾಯಿತು ಎಂದು ಶೆಟ್ಟರ್ ತಿಳಿಸಿದ್ದಾರೆ.

150 ನೇ ವಾರ್ಷಿಕೋತ್ಸವ ಸಮಾರಂಭವು ತಾತ್ಕಾಲಿಕವಾಗಿ 4ನೇ ಅಕ್ಟೋಬರ 2025 ರಂದು ಆಯೋಜಿತಗೊಂಡಿರುತ್ತದೆ.

ರಾಜ್ಯಾದ್ಯಂತ ಸುಮಾರು 20 ಸಾವಿರಕ್ಕೂ ಅಧೀಕ ಸಂಖ್ಯೆಯಲ್ಲಿ ವಕೀಲರ ಸಮೂಹ ಭಾಗವಹಿಸಲಿದ್ದು, ಅದರಂತೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಸಹ ಇದರಲ್ಲಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವ ಬಗ್ಗೆ ಒಪ್ಪಿಗೆ ಸೂಚಿಸುವಂತೆ ಮಾನ್ಯ ಪ್ರಧಾನ ಮಂತ್ರಿಗಳಲ್ಲಿ ವಿನಂತಿಸಲಾಯಿತು.

ಮನವಿಯನ್ನು ಅವಲೋಕಿಸಿದ ಪ್ರಧಾನ ಮಂತ್ರಿಗಳು, ಈ ಪ್ರಸ್ತಾಪಿತ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಇದರಲ್ಲಿ ಭಾಗವಹಿಸುವ ಬಗ್ಗೆ ಭರವಸೆಯನ್ನು ನೀಡಿರುವುದರ ಕುರಿತು ತಿಳಿಸಿದರು.

ಮುಂದುವರೆದು ಬೆಳಗಾವಿ – ಬೆಂಗಳೂರು – ಬೆಳಗಾವಿ ನಡುವೆ “ವಂದೇ ಭಾರತ” ಎಕ್ಸಪ್ರೆಸ್ ರೈಲು ಸಂಚಾರಕ್ಕೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಅದರಂತೆ ರೈಲು ಶೀಘ್ರ ಪ್ರಸ್ತಾಪಿತ ಮಾರ್ಗದಲ್ಲಿ ಸಂಚರಿಸುವ ಬಗ್ಗೆ ಹಸಿರು ನಿಶಾನೆ ತೋರಿಸಲು ಪ್ರಧಾನ ಮಂತ್ರಿಗಳಲ್ಲಿ ಇದೇ ಸಂದರ್ಭದಲ್ಲಿ ವಿನಂತಿಸಲಾಗಿ, ಈ ಬಗ್ಗೆ ಅಗತ್ಯ ಸೂಚನೆಯನ್ನು ಕೇಂದ್ರ ರೇಲ್ವೆ ಸಚಿವರಿಗೆ ನೀಡುವುದಾಗಿ ಸಹ ಅವರು ತಿಳಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ