ಬೆಳಗಾವಿ: ಮಹತ್ವದ ಬೆಳವಣಿಗೆಯಲ್ಲಿ ಸಂಸದ ಜಗದೀಶ್ ಶೆಟ್ಟರ್ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಇ.ಡಿ ದಾಳಿ ನಡೆದಿರುವ ಬೆನ್ನಲ್ಲೇ ಈ ಭೇಟಿ ನಡೆದಿರುವದು ಕುತೂಹಲ ಹುಟ್ಟಿಸಿದೆ. ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಮನೆಯಲ್ಲಿ ಈ ಭೇಟಿ ನಡೆದಿದೆ.
ಗೋಕಾಕ್ ತಾಲೂಕಿನ ಪ್ರವಾಸದಲ್ಲಿದ್ದ ಸಂಸದ ಜಗದೀಶ್ ಶೆಟ್ಟರ್ ಇದೇ ಸಮಯದಲ್ಲಿ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದಾರೆ.ಭೇಟಿಯ ಸಮಯದಲ್ಲಿ ರಾಜಕೀಯ ಚರ್ಚೆಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹಾಗೂ ರಮೇಶ್ ಅವರ ಪುತ್ರ ಅಮರನಾಥ ಅವರು ಉಪಸ್ಥಿತರಿದ್ದರು.


