Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದಿನ ಪೀಳಿಗೆಗಳಿಗೆ ಜೈ ಬಾಪು ಜೈ ಭೀಮ್ ಜೈ ಸಂವಿಧಾನ ತಿಳಿಸಿಕೊಡುವುದು ಮುಖ್ಯ ಉದ್ದೇಶವಾಗಿದೆ ರಾಹುಲ್ ಜಾರಕಿಹೊಳಿ

Advertisement
ಚಿಕ್ಕೋಡಿ : ಇಂದಿನ ಪೀಳಿಗೆಗೆ ಮಹಾತ್ಮ ಗಾಂಧೀಜಿ ಹಾಗೂ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ತಿಳಿಸುವ ಉದ್ದೇಶದಿಂದ ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಹೇಳಿದರು.

ಅವರು ಇಂದು ಚಿಕ್ಕೋಡಿಯ ಪಿಡಬ್ಲ್ಯೂಡಿ ಸಭಾ ಭವನದಲ್ಲಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಸಂಘ (ಎನ್‌ಎಸ್‌ಯುಐ) ಚಿಕ್ಕೋಡಿ ಜಿಲ್ಲೆ ವತಿಯಿಂದ ಆಯೋಜಿಸಿದ್ದ ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಕೇಂದ್ರದ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ಕಡೆಗಣಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು.

ಬಿಜೆಪಿ ಪ್ರಜಾಪ್ರಭುತ್ವವನ್ನು ಕೊಲ್ಲುವ ಕೆಲಸ ಮಾಡುತ್ತಿದ್ದು, ನಾವೆಲ್ಲರೂ ಎಚ್ಚೆತ್ತುಕೊಂಡು ಸಂವಿಧಾನವನ್ನು ರಕ್ಷಿಸುವ ಅಗತ್ಯವಿದೆ ಎಂದು ಹೇಳಿದರು.

ಗಾಂಧೀಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಅವರನ್ನು ಸ್ಮರಿಸಬೇಕಾಗಿದೆ. ಒಬ್ಬ ವ್ಯಕ್ತಿ ಯಾವ ಮಟ್ಟಕ್ಕೆ ತಲುಪಬಹುದು ಎಂಬುದನ್ನು ಅಂಬೇಡ್ಕರ್ ಅವರಿಂದ ಕಲಿಯಬೇಕು. ಬುದ್ಧ ಬಸವ ಅಂಬೇಡ್ಕರ್ ಅವರು ಸಮಾನತೆಗಾಗಿ ಶ್ರಮಿಸಿದ್ದಾರೆ.



ಇತ್ತೀಚೆಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಒಂದು ಲಕ್ಷ 90 ಸಾವಿರ ಮತಗಳ ಅಂತರದಿಂದ ಆಯ್ಕೆಯಾಗಿದ್ದೇನೆ. ಪಕ್ಷವು ನೀಡಿದ ಜವಾಬ್ದಾರಿಯನ್ನು ನಿರ್ವಹಿಸುವುತೇನೆ. ಸಂಘಟನೆಯನ್ನು ಬಲಪಡಿಸೋಣ ಎಂದು ಹೇಳಿದರು.

ಈ ವೇಳೆ ಮಾತನಾಡಿದ ಎನ್ ಎಸ್ ಯುಐ ರಾಜ್ಯಾಧ್ಯಕ್ಷ ಹಾಗೂ ಡಿ.ದೇವರಾಜ್ ಅರಸು ನಿಗಮ ಮಂಡಳಿ ಬೆಂಗಳೂರು ಅಧ್ಯಕ್ಷ ಕೀರ್ತಿ ಗಣೇಶ ಮಾತನಾಡಿ ಬಾಬಾಸಾಹೇಬರು ನಮಗೆಲ್ಲ ಸಮಾನತೆ ತಂದು ಕೊಟ್ಟಿದಾರೆ. ಹೋರಾಟದ ಸಮಯವಾಗಿದ್ದು, ಈ ದೇಶವು ಗಾಂಧೀಜಿಯವರ ತತ್ವಗಳ ಮೇಲೆ ನಡೆಯುತ್ತಿದ್ದು, ಸಂವಿಧಾನವನ್ನು ರಕ್ಷಿಸುವ ಅಗತ್ಯವಿದೆ ಎಂದು ಹೇಳಿದರು.

ಚಿಕ್ಕೋಡಿ ಜಿಲ್ಲಾಧ್ಯಕ್ಷ ಚೇತನ್ ಹೊಣಗೊಳ ಮಾತನಾಡಿ, ಚಿಕ್ಕೋಡಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಯುವತಿಯರ ಸಮಸ್ಯೆಗಳ ಪರಿಹಾರಕ್ಕೆ ಎನ್ ಎಸ್ ಎಯುಐ ಹಲವು ಹೋರಾಟಗಳನ್ನು ಮಾಡಿ ಆ ಸಮಸ್ಯೆಗಳನ್ನು ಪರಿಹರಿಸಿದೆ. ಇಂದು ಪ್ರತಿಯೊಬ್ಬರು ಬುದ್ಧ ಬಸವ ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಪಾಲಿಸುವ ಅಗತ್ಯವಿದ್ದು, ಸಂವಿಧಾನ ರಕ್ಷ ಣೆಗೆ ಯುವಕರೆಲ್ಲರೂ ಒಂದಾಗಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ವಿವೇಕ್ ಯಾವಗಲ್, ಕರ್ನಾಟಕ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ ನಡುವಳಿ ಮಾತನಾಡಿದರು.

ಪ್ರಾರಂಭದಲ್ಲಿ ಸಂವಿಧಾನದ ಪೀಠಿಕೆ ವಾಚನ ಹಾಗೂ ಮಹಾಪುರುಷರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಗಣೇಶ ಮೋಹಿತೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಿರ್ಮಲಾ ಪಾಟೀಲ್, ಅರ್ಜುನ್ ನಾಯಿಕವಾಡಿ, ಶಿವು ಪಾಟೀಲ್, ಸಂದೀಪ್, ರುದ್ರಪ್ಪ ಸಂಗಪ್ಪಗೋಳ್, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾನಂದ ಮರ್ಯಾಯಿ, ಅಕ್ಷಯ ವೀರಮುಖ, ಜ್ಯೋತಿ ಪಾಟೀಲ್, ಬಾಳಕೃಷ್ಣ ಪಾಟೀಲ್, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಸಂಜಯ ಕಾಂಬಳೆ, ನಾಮದೇವ್ ಕಾಂಬಳೆ, ಮುತ್ತಪ್ಪ ಕಬ್ಬುರೆ, ಬಾಳಕೃಷ್ಣ ಪಾಟೀಲ್, ಪೀ ಐ ಕೋರೆ, ಮಹಾಂತೇಶ್ ಖೋತ, ರೋಹಿತ್ ಯಾದವ, ಸಚಿನ್ ಪವಾರ ಸೇರಿದಂತೆ ಹಲವಾರು ಕಾಂಗ್ರೆಸ್ ಯುವ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ