LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಸಕ್ತರಿಗೆ ಆಸರೆಯಾದ ಧರ್ಮಸ್ಥಳ ಸಂಸ್ಥೆಯ ಜನಮಂಗಲ ಕಾರ್ಯಕ್ರಮ : ಸುಧೀರ್‌ ಹಂಗಳೂರು

Advertisement
ಸಿರುಗುಪ್ಪ : ನಗರದ ಸದಾಶಿವನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ವತಿಯಿಂದ ಜನಮಂಗಲ ಕಾರ್ಯಕ್ರಮದಡಿಯಲ್ಲಿ ಅಶಕ್ತರು/ವಿಶೇಷ ಚೇತನರಿಗೆ ಮಂಜೂರುಗೊಂಡ ವಾಟರ್‌ ಬೆಡ್‌ನ್ನು ಸದಾಶಿವನಗರದ ದುರುಗಮ್ಮನವರಿಗೆ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ಸುಧೀರ್‌ ಹಂಗಳೂರು ರವರು ವಿತರಿಸಿದರು.

ನಂತರ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುತ್ತಿದೆ ಅದರಲ್ಲೂ ವಿಶೇಷವಾಗಿ ಅಶಕ್ತರು/ವಿಶೇಷ ಚೇತನರಿಗೆ ಜಲಮಂಗಲ ಕಾರ್ಯಕ್ರಮದಡಿ ವೀಲ್ ಚೇರ್, ಕಮೋಡ್ ಚೇರ್, ಯು ಸೇಫ್ ವಾಕರ್, ತ್ರೀ ಲೆಗ್ ಸ್ಟಿಕ್, ಸಿಂಗಲ್ ಲೆಗ್ ಸ್ಟಿಕ್, ವಾಟರ್ ಬೆಡ್ ಸಲಕರಣೆಗಳನ್ನು ವಿತರಿಸಲಾಗುತ್ತಿದ್ದು, ತಾಲೂಕಿನಲ್ಲಿ ಈವರೆಗೆ 38 ಲಕ್ಷ ಮೌಲ್ಯದ ಸಲಕರಣೆಗಳನ್ನು ವಿತರಿಸಲಾಗಿದ್ದು ವಿಶೇಷ ಚೇತನರು ಗೌರವಯುತ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಊರಿನ ಗಣ್ಯರಾದ ಇನುಸ್, ವಲಯ ಮೇಲ್ವಿಚಾರಕಿ ರೇಣುಕಾ, ಜ್ಞಾನವಿಕಾಸ ಸಮನ್ವಯಾಧಿಕಾರಿ ಪ್ರೀಯಾ, ಸೇವಾ ಪ್ರತಿನಿಧಿ ಅನಿತಾ, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ