Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನವೋದ್ಯಮಗಳಿಗೆ 100 ಕೋಟಿ ರೂ. ಆರ್ಥಿಕ ನೆರವು : ಸಚಿವ ಜೋಶಿ

Advertisement
ನವದೆಹಲಿ:ಹಸಿರು ಹೈಡೋಜನ್ ಸಂಶೋಧನೆ ಮತ್ತು ಅಭಿವೃದ್ಧಿನಿರತ ನವೋದ್ಯಮಗಳಿಗೆ ಕೇಂದ್ರ ಸರ್ಕಾರ ಒಟ್ಟಾರೆ 100 ಕೋಟಿ ರೂ. ಆರ್ಥಿಕ ನೆರವು ನೀಡಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಆಯೋಜಿಸಿದ್ದ ಮೊದಲ ವಾರ್ಷಿಕ ಹಸಿರು ಹೈಡೋಜನ್ ಸಂಶೋಧನೆ ಮತ್ತು ಅಭಿವೃದ್ಧಿ ಸಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಹಸಿರು ಹೈಡೋಜನ್ ನಾವೀನ್ಯತೆಯಲ್ಲಿ ನವೋದ್ಯಮಗಳನ್ನು ಬೆಂಬಲಿಸಲು 100 ಕೋಟಿ ರೂ. ಆರ್ಥಿಕ ನೆರವಿಗೆ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ ಎಂದರು.

ನವೀನ ಜಲಜನಕ ಉತ್ಪಾದನೆ, ಸಂಗ್ರಹಣೆ, ಸಾರಿಗೆ ಮತ್ತು ಬಳಕೆಯಲ್ಲಿ ತಂತ್ರಜ್ಞಾನ ಅಳವಡಿಕೆಯ ಪ್ರತಿ ಯೋಜನೆಗೆ 5 ಕೋಟಿ ವರೆಗೆ ಒದಗಿಸುತ್ತದೆ. ಎಲೆಕ್ಟೋಲೈಜರ್ ಉತ್ಪಾದನೆಯಿಂದ ಹಿಡಿದು ಎಐ- ಚಾಲಿತ 25 ನವೋದ್ಯಮಗಳು ನಾವೀನ್ಯತೆ ಪ್ರದರ್ಶಿಸುತ್ತಿವೆ. ರಸಗೊಬ್ಬರಗಳಲ್ಲಿ ಭಾರತ ಮೊದಲ ಹಸಿರು ಅಮೋನಿಯಾ ಹರಾಜು ನಡೆಸಿದ್ದು 2024ರಲ್ಲಿ ಪ್ರತಿ ಕೆಜಿಗೆ 100.28ರೂ.ಇದ್ದರೆ, ಇದೀಗ ಪ್ರತಿ ಕೆಜಿಗೆ ಅದರ ಅರ್ಧದಷ್ಟು ಅಂದರೆ ಕೇವಲ 49.75 ರೂ. ಐತಿಹಾಸಿಕವಾಗಿ ಕಡಿಮೆ ಬೆಲೆ ದಾಖಲಾಗಿದೆ. ಒಡಿಶಾದ ಪ್ಯಾರದೀಪ್ ಫಾಸ್ಪೇಟ್‌ಗಳಲ್ಲಿ ಸರಬರಾಜು ಪ್ರಾರಂಭವಾಗಲಿದೆ ಎಂದು ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ