ತುರುವೇಕೆರೆ : ಇತ್ತೀಚೆಗೆ ತುರುವೇಕೆರೆಯಲ್ಲಿ ನಡೆದ ತುಮಕೂರು ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಎಸ್.ಬಿ.ಜಿ. ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಅಯ್ಕೆಯಾಗಿದ್ದಾರೆ.
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು, ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿಗಳು, ಕಾಲೇಜಿನ ಆಡಳಿತ ಮಂಡಳಿ, ಬೋಧಕ ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.
ವರದಿ: ಗಿರೀಶ್ ಕೆ ಭಟ್


