Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲಕಾಂಬ ಗ್ರಾಮ ಪಂಚಾಯಿತಿ ಪೆಟ್ರೋಲ್‌ ಬಾಂಬ್‌ ಎಸೆದ ಕಿಡಿಗೇಡಿಗಳು 

Advertisement
ಬೆಳಗಾವಿ: ತಾಲ್ಲೂಕಿನ ಕಲಕಾಂಬ ಗ್ರಾಮ ಪಂಚಾಯಿತಿ ಕಟ್ಟಡದೊಳಗೆ ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಪೆಟ್ರೋಲ್‌ ಬಾಂಬ್‌ ಎಸೆದು ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಕಚೇರಿಯೊಳಗಿನ ಕೆಲ ಪೀಠೋಪಕರಣಗಳಿಗೆ ಹಾನಿಯಾಗಿದೆ. ಸಿಸಿಟಿವಿ ಕ್ಯಾಮೆರಾ ಕೂಡ ಕಿತ್ತುಕೊಂಡು ಹೋಗಿದ್ದಾರೆ.

ಘಟನೆ ಶನಿವಾರ ಬೆಳಿಗ್ಗೆಯೇ ಜನರಿಗೆ ಗೊತ್ತಾಗಿದೆ. ಬಿಯರ್‌ ಬಾಟಲಿಯಲ್ಲಿ ಪೆಟ್ರೋಲ್‌ ತುಂಬಿ, ಅದಕ್ಕೆ ಬೆಂಕಿ ಹಚ್ಚಿ ಗ್ರಾಮ ಪಂಚಾಯಿತಿ ಕಟ್ಟಡದ ಕಿಟಕಿಗೆ ಎಸೆಯಲಾಗಿದೆ.

ಕಿಟಕಿಗೆ ಹೊತ್ತಿಕೊಂಡ ಬೆಂಕಿ ಕೆಲ ನಿಮಿಷಗಳ ಬಳಿಕ ತಾನಾಗಿಯೇ ನಂದಿದೆ. ಅದರ ಪಕ್ಕದಲ್ಲಿ ಟೇಬಲ್‌, ಕುರ್ಚಿಗಳೊಗೆ ಹಾನಿಯಾಗಿದೆ. ಯಾವುದೇ ದಾಖಲೆಗಳು ಸುಟ್ಟಿಲ್ಲ.

ಈ ಗ್ರಾಮ ಸಚಿವ ಸತೀಶ ಜಾರಕಿಹೊಳಿ ಅವರು ಪ್ರತಿನಿಧಿಸುವ ಯಮಕನಮರಡಿ ವಿಧಾನಸಭಾ ಕ್ಷೇತ್ರ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಅವರ ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟಿದೆ.

ಸಂಸದೆ ಪ್ರಿಯಾಂಕಾ ಅವರು ಶುಕ್ರವಾರ ಗ್ರಾಮಕ್ಕೆ ಬಂದು ಕೆಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದರು. ಗ್ರಾಮದ ಒಂದು ಗುಂಪು ಅವರನ್ನು ಆಹ್ವಾನಿಸಿತ್ತು. ಸಂಸದೆಯನ್ನು ಗ್ರಾಮದ ವಾಲ್ಮೀಕಿ ಗಲ್ಲಿಗೂ ಕರೆದುಕೊಂಡು ಬರಬೇಕು ಎಂದು ಇನ್ನೊಂದು ಗುಂಪು ಒತ್ತಾಯ ಮಾಡಿತ್ತು.

ಈ ವಿಚಾರವಾಗಿ ಎರಡೂ ಗುಂಪುಗಳ ನಡುವೆ ಗಲಾಟೆ ಕೂಡ ನಡೆದಿತ್ತು. ಗ್ರಾಮ ಪಂಚಾಯಿತಿಗೆ ಪೆಟ್ರೋಲ್‌ ಬಾಂಬ್‌ ಎಸೆದ ಘಟನೆಗೂ ಇದಕ್ಕೂ ಸಂಬಂಧವಿರಬಹುದು ಎಂದು ಗ್ರಾಮಸ್ಥರು ಹೇಳಿದ್ದಾರೆ.ಮಾರಿಹಾಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ