Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೊದಲು ಕನ್ನಡಿಗರ ಕ್ಷಮೆ ಕೇಳಿ : ಕಮಲ್ ಹಾಸನ್ ಗೆ ಹೈಕೋರ್ಟ್ ಚಾಟಿ 

Advertisement
ಬೆಂಗಳೂರು : ಥಗ್‌ ಲೈಫ್‌ ಸಿನಿಮಾ ಬಿಡುಗಡೆ ಅಡ್ಡಿಯನ್ನು ತೆರವು ಮಾಡುವಂತೆ ಕಮಲ್‌ ಹಾಸನ್‌ ಹಾಗೂ ಸಿನಿಮಾ ನಿರ್ಮಾಣ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಿಚಾರಣೆಗೊಳಪಡಿಸಿದೆ.

ಮೊದಲು ಕನ್ನಡಿಗರ ಕ್ಷಮೆ ಕೇಳಿ ಬಳಿಕ ಅರ್ಜಿ ವಿಚಾರಣೆ ನಡೆಸುತ್ತೇವೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಕಮಲ್‌ ಹಾಸನ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಸರ್ಕಾರದ ಪರವಾಗಿ ನ್ಯಾಯವಾದಿ ಭಾನುಪ್ರಕಾಶ್‌ ವಾದಿಸಿದರು.

ಕಮಲ್‌ ಹಾಸನ್‌ ಯಾರೇ ಇರಲಿ ನೆಲ ಜಲ ವಿಚಾರದಲ್ಲಿ ರಾಜಿ ಇಲ್ಲ ಎಂದು ನ್ಯಾಯಮೂರ್ತಿಗಳು ಕನ್ನಡಮ್ಮನ ಪರವಾಗಿ ನಿಂತು ಭಾಷಾ ಪ್ರೇಮ ಮೆರೆದರು. ಕಮಲ್‌ ಹಾಸನ್‌ ಅವರನ್ನು ತರಾಟೆಗೆ ತೆಗೆದುಕೊಂಡ ನ್ಯಾ.ನಾಗ ಪ್ರಸನ್ನ ಯಾವುದೋ ಭಾಷೆಯಿಂದ ಕನ್ನಡ ಹುಟ್ಟಿದೆ ಎಂದರೆ ಹೇಗೆ? ಇಂದಿನ ಪರಿಸ್ಥಿತಿಗೆ ಕಮಲ್‌ ಹಾಸನ್‌ ನೇರ ಕಾರಣ. ಮೊದಲು ಆ ಬಗ್ಗೆ ಕ್ಷಮೆ ಕೇಳಿ. ಬಳಿಕ ನಿಮ್ಮ ಅರ್ಜಿಯನ್ನು ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ.

ಸಿನಿಮಾ ಬಿಡುಗಡೆಗೆ ತೊಂದರೆ ಆಗುತ್ತದೆ ಎಂದು ಅರ್ಜಿ ಹಾಕಿದ್ದೀರಾ. ನನಗೆ ತಲೆಯಲ್ಲಿ ಬುದ್ದಿ ಇಲ್ಲದೇ ಆ ರೀತಿ ಮಾತನಾಡಿದೆ ಎಂದು ಕನ್ನಡಿಗರ ಕ್ಷಮೆ ಕೇಳಿ . ಈ ಹಿಂದೆ ರಾಜಗೋಪಾಲಾಚಾರಿ ಕ್ಷಮೆ ಕೇಳಿದ್ದರು. ಬಳಿಕ ಪರಿಸ್ಥಿತಿ ತಣ್ಣಗಾಯ್ತು ಎಂದು ನ್ಯಾಯಮೂರ್ತಿ ಕಮಲ್‌ ಹಾಸನ್‌ ಅವರ ಮುಖದಲ್ಲಿ ನೀರಿಳಿಸಿದರು.

ಥಗ್‌ ಲೈಫ್‌ ಸಿನಿಮಾ ಪ್ರಚಾರದ ವೇಳೆ ಕಮಲ್‌ಹಾಸನ್‌ ತಮಿಳು ಭಾಷೆಯಿಂದಲೇ ಕನ್ನಡ ಹುಟ್ಟಿದೆ ಎಂಬ ಅಸಂಬದ್ಧ ಹೇಳಿಕೆ ನೀಡಿದ್ದರು. ಇದಕ್ಕೆ ಕನ್ನಡಿಗರೂ ಹಾಗೂ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಥಗ್‌ ಲೈಫ್‌ ಸಿನಿಮಾ ಬಿಡುಗಡೆ ನಿಷೇಧ ಹೇರಿತ್ತು.

ಈ ಮೂಲಕ ಹೈಕೋರ್ಟ್‌ ಕನ್ನಡಿಗರ ಹೋರಾಟಕ್ಕೆ ಪರೋಕ್ಷ ಬೆಂಬಲ ನೀಡಿರುವುದಲ್ಲದೇ, ತಮಿಳು ಪಾರಮ್ಯ ಮೆರೆಯುತ್ತಿರುವ ಭಾಷಾಂಧರ ಸುಳ್ಳು ಪ್ರತಿಷ್ಠೆಯನ್ನು ತೊಡೆದುಹಾಕಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ