Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರಿನಲ್ಲಿ ಕನ್ನಡ ರಾಜ್ಯೋತ್ಸವ

Advertisement
------------------ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲರಿಂದ ಧ್ವಜಾರೋಹಣ

ರಾಯಚೂರು: 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಯಚೂರಿನ ಜಿಲ್ಲಾ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡ.ಶರಣಪ್ರಕಾಶ ಪಾಟೀಲ್ ರಾಷ್ಟ್ರ ಧ್ವಜಾರೋಹಣ ಮಾಡಿದರು.



ಈ ವೇಳೆ ಮಾತನಾಡುದ ಅವರು, ನಮ್ಮ ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ನೆರೆ ಹಾವಳಿ ಯಿಂದ ತತ್ತರಿಸಿದ ಉತ್ತರ ಕರ್ನಾಟಕಕ್ಕೆ ನೆರೆ ಪರಿಹಾರ ಘೋಷಿಸಿದೆ. ಕಲ್ಯಾಣ ಕರ್ನಾಟಕದ ಏಳಿಗೆಗೆ ಅನೇಕ ಯೋಜನೆ ರೂಪಿಸಿದೆ. ಕೆಕೆಆರ್ ಡಿಬಿಗೆ ಪ್ರತಿವರ್ಷ 5ಸಾವಿರ ಕೋಟಿ ನೀಡುತ್ತಿದೆ. ರಾಯಚೂರು ಜಿಲ್ಲೆಯಲ್ಲಿ ಅಭಿವೃದ್ಧಿಗೆ ಏರ್ ಪೋರ್ಟ್, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೈ.ವೆ ಸೇರಿ ಅನೇಕ ಅಭಿವೃದ್ಧಿ ಕೆಲಸ ಮಾಡಲಾಗುತ್ತಿದೆ. ಏಮ್ಸ್ ಸ್ಥಾಪಿಸಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿದೆ. ಮುಖ್ಯಮಂತ್ರಿ ಸೇರಿ ಮಂತ್ರಿಗಳ ನಿಯೋಗ ಹೋಗಿದೆ. ಕೇಂದ್ರ ಸರ್ಕಾರ ಸ್ಪಂದಿಸಲಿದೆ ಎಂಬ ಭರವಸೆ ಇದೆ.

ಸಿ.ಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ ಪ್ರತಿಯೊಂದು ಕೆಲಸಕ್ಕೆ ಆದ್ಯತೆ ನೀಡಿ ಸಮೃದ್ಧ ಕರ್ನಾಟ ಅಭಿವೃದ್ಧಿ ಗೆ ಬದ್ಧವಾಗಿದೆ. ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಈ‌ವೇಳೆ ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಎಸ್.ಶಿವರಾಜ ಪಾಟೀಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ರಾಯಚೂರು ಲೋಕಸಭಾ ಸದಸ್ಯ ಜಿ.ಕುಮಾರ ನಾಯಕ, ವಿಧಾನ ಪರಿಷತ್ ಶಾಸಕರಾದ ಎ.ವಸಂತಕುಮಾರ, ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ರಾಮಸ್ವಾಮಿ, ರಾಯಚೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ್, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಎಂ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ವರದಿ: ಗಾರಲ ದಿನ್ನಿ ವೀರನ ಗೌಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್