ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಅರ್ಜಿದಾರರು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಳಿ ಮನವಿ ಮಾಡಿದ್ದಾರೆ. ಶೀಘ್ರವೇ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಒಪ್ಪಿದೆ. ವಿಷಯವನ್ನು ಇಂದು ಅಥವಾ ನಾಳೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಜೆಐ ತಿಳಿಸಿದ್ದಾರೆ.
ಕರ್ನಾಟಕದ ಹನಿ ಟ್ರ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಸಚಿವರು ಮತ್ತು ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರು ಸಿಲುಕಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಕರ್ನಾಟಕ ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ವಿಧಾನಸಭೆ ಅಧಿವೇಶನದಲ್ಲಿ ಹನಿಟ್ರ್ಯಾಪ್ನಲ್ಲಿ ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಬಹಿರಂಗಪಡಿಸಿದ ನಂತರ ವಿವಾದ ಭುಗಿಲೆದ್ದಿದೆ.

