Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪವನ ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲಿಯೇ ಮೊದಲ ಸ್ಥಾನ

Advertisement
ಬೆಂಗಳೂರು: ಪವನ ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ ಲಭಿಸಿದೆ. ಬರೋಬ್ಬರಿ 1331.48 ಮೆಗಾವ್ಯಾಟ್ ಪವನ ವಿದ್ಯುತ್ ಸಾಮರ್ಥ್ಯ ಸಾಧಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಬೆಂಗಳೂರಿನಲ್ಲಿ ಭಾನುವಾರ ಆಯೋಜಿಸಿದ್ದ 'ಗ್ಲೋಬಲ್ ವಿಂಡ್ ಡೇ' 2025 "ಪವನ್-ಉರ್ಜಾ: ಪವರಿಂಗ್‌ ದಿ ಫ್ಯೂಚರ್ ಆಫ್ ಇಂಡಿಯಾ" ಸಮಾರಂಭದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಅವರಿಂದ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಪ್ರಶಸ್ತಿ ಸ್ವೀಕರಿಸಿದರು.

2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ವಲಯಕ್ಕೆ 1331.48 ಮೆ.ವ್ಯಾ. ಸಾಮರ್ಥ್ಯ ಸೇಪರ್ಡೆಗೊಳಿಸಿರುವ ರಾಜ್ಯ ಪ್ರಥಮ ಸ್ಥಾನದಲ್ಲಿದ್ದರೆ, 1136.37 ಮೆ.ವ್ಯಾ. ಸಾಮರ್ಥ್ಯವನ್ನು ಸೇರ್ಪಡೆಗೊಳಿಸಿರುವ ತಮಿಳುನಾಡು ಎರಡನೇ ಸ್ಥಾನದಲ್ಲಿದೆ. 954.74 ಮೆ.ವ್ಯಾ ಸೇರ್ಪಡೆಗೊಳಿಸಿರುವ ಗುಜರಾತ್‌ ಮೂರನೇ ಸ್ಥಾನದಲ್ಲಿದೆ.

ಕಳೆದ ಸಾಲಿನಲ್ಲಿ ಗುಜರಾತ್‌ ಮೊದಲ ಸ್ಥಾನ, ಕರ್ನಾಟಕ ಎರಡನೇ ಸ್ಥಾನ ಹಾಗೂ ತಮಿಳುನಾಡು ಮೂರನೇ ಸ್ಥಾನದಲ್ಲಿತ್ತು. ಪ್ರಸಕ್ತ ಸಾಲಿನಲ್ಲಿ ಈ ಎರಡೂ ರಾಜ್ಯಗಳನ್ನು ಹಿಂದಿಕ್ಕಿ ಕರ್ನಾಟಕ ಅಗ್ರ ಸ್ಥಾನಕ್ಕೇರಿದೆ.

ವಿಶ್ವ ಪವನ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್‌,"2025ರ ಮೇ ವೇಳೆಗೆ ಪವನ ವಿದ್ಯುತ್ತಿನ ಸ್ಥಾಪಿತ ಸಾಮರ್ಥ್ಯ 7,351 ಮೆಗಾವ್ಯಾಟ್‌ನಷ್ಟಿತ್ತು.

ಕಳೆದ ಆರ್ಥಿಕ ಸಾಲಿನಲ್ಲಿ 1,331 ಮೆಗಾವ್ಯಾಟ್‌ಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ ಅಗ್ರಮಾನ್ಯ ಸ್ಥಾನದಲ್ಲಿದ್ದೇವೆ," ಎಂದು ತಿಳಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ