LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸ್ಟಿಂಗ್ ಆಪರೇಷನ್‌ಗೆ ಕರ್ನಾಟಕ ಮಾಡೆಲ್ ಆಗಲಿದೆ:  ಕೆ.ಎನ್.ರಾಜಣ್ಣ 

Advertisement

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣ ಹಾಗೂ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಮಾತನಾಡಿರುವ ಮಾಜಿ ಸಚಿವ, ಶಾಸಕ ಕೆ.ಎನ್.ರಾಜಣ್ಣ, ತಮ್ಮದೇ ಶೈಲಿಯಲ್ಲಿ ಅಭಿವೃದ್ಧಿಗೆ ಗುಜರಾತ್ ಮಾಡೆಲ್ ಅಂತ ಪ್ರಧಾನಿ ಮೋದಿ ಹೇಳುತ್ತಾರೆ.

ಅದೇ ರೀತಿ ಮುಂದೆ ದೇಶಾದ್ಯಂತ ಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಕರ್ನಾಟಕ ಮಾಡೆಲ್ ಅಂತ ಅಪಕೀರ್ತಿಗೆ ಕಾರಣವಾಗುತ್ತದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಾಜಣ್ಣ, ಸ್ಟಿಂಗ್ ಆಪರೇಷನ್ ಪ್ರಕರಣದಿಂದ ಕರ್ನಾಟಕದ ಗೌರವಕ್ಕೆ ಧಕ್ಕೆಯಾಗಲಿದ್ದು, ಕನ್ನಡಿಗರು ತಲೆತಗ್ಗಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಬಂದಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ರಾಜಣ್ಣ, ಸ್ಟಿಂಗ್ ಆಪರೇಷನ್‌ನಿಂದ ಪಕ್ಷದ ಮೇಲಾಗುತ್ತಿರುವ ಪರಿಣಾಮಗಳು, ವೈಯಕ್ತಿಕ ವರ್ಚಸ್ಸಿನ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರೊಂದಿಗೆ ವಿವರವಾಗಿ ಚರ್ಚಿಸಿದ್ದಾರೆ ಎಂಬ ಮಾಹಿತಿ ಇದೆ ಎಂದು ತಿಳಿಸಿದರು.

ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಉನ್ನತ ಮಟ್ಟದಲ್ಲಾಗಲಿ ಅಥವಾ ಕೆಳಮಟ್ಟದಲ್ಲಾಗಲಿ, ಸೂಕ್ತ ತನಿಖೆ ನಡೆದು ಸತ್ಯ ಹೊರಬರಬೇಕು. ಈ ಪ್ರಕರಣದಲ್ಲಿ ನಿರಪರಾಧಿಗಳನ್ನು ಸಿಲುಕಿಸುವ ಪ್ರಯತ್ನ ನಡೆದಿದ್ದರೆ ಅವರಿಗೆ ನ್ಯಾಯ ಸಿಗಬೇಕು. ಇಂತಹ ಕೃತ್ಯಗಳಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬರ ಪರಿಹಾರಕ್ಕಾಗಿ ₹22,400 ಕೋಟಿ ಕೊಡಿ : ಕೇಂದ್ರಕ್ಕೆ ಮತ್ತೆ ಪತ್ರ ಬರೆದ ಜಿ. ಪರಮೇಶ್ವರ್ಮೈದಾನದಲ್ಲೇ ದುರಂತ: ಗೋಲ್‌ಕೀಪರ್ ಡಿಕ್ಕಿಯಾಗಿ ಆಟಗಾರ ಸಾವುಮಾನ್ವಿ ತಾಲೂಕಿನಲ್ಲಿ 70ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳ ದಾಖಲೆಮಾನ್ವಿ ಪಟ್ಟಣದ ಕುಡಿಯುವ ನೀರಿನ ಕೆರೆ ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಿ: ಎನ್.ಎಸ್. ಬೋಸರಾಜುಬಾಪುರ ನರಸಿಂಹ ಶೆಟ್ಟಿ ಕುಟುಂಬಕ್ಕೆ ಆರ್ಯವೈಶ್ಯ ಸಂಘದಿಂದ 2 ಲಕ್ಷ ಸಹಾಯಧನಗೋಕಾಕನಲ್ಲಿ ಮಹಿಳೆ ಕೊಲೆ ಆರೋಪ: ಪ್ರಿಯಕರನ ವಿರುದ್ಧ ಎಫ್‌ಐಆರ್ಸ್ಟಿಂಗ್ ಆಪರೇಷನ್‌ಗೆ ಕರ್ನಾಟಕ ಮಾಡೆಲ್ ಆಗಲಿದೆ:  ಕೆ.ಎನ್.ರಾಜಣ್ಣ ಕೆ. ವಿ. ಅನಿಸ್ ಅಮೋಘ ಶತಕ : ಇನ್ನಿಂಗ್ಸ್ ಗೆಲುವಿನತ್ತ ಕರ್ನಾಟಕ ಚಿತ್ತ ವೈಭವ್ ಸೂರ್ಯವಂಸಿ, ರಜತ ಪಟಿದಾರ್ ಗೆ ಸ್ಥಾನ ರಿಂಗ್ ರೋಡ್ ಬೇಡ, ಪಾಣಂದ್ ರಸ್ತೆಗಳನ್ನು ದುರಸ್ತಿ ಮಾಡಿ - ಸದಲಗಾ ಭಾಗದ ರೈತರ ಏಕಮುಖ ಬೇಡಿಕೆ