LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹಿರಿಯ ಪತ್ರಕರ್ತ, ಮೈಸೂರು ಮಿತ್ರ ಪತ್ರಿಕೆಯ ಸಂಪಾದಕ ಕೆ.ಬಿ. ಗಣಪತಿ ಹೃದಯಾಘಾತಕ್ಕೆ ಬಲಿ 

Advertisement
ಮೈಸೂರು : ಹಿರಿಯ ಪತ್ರಕರ್ತ ಹಾಗೂ ಸ್ಟಾರ್‌ ಆಫ್‌ ಮೈಸೂರು ಮತ್ತು ಮೈಸೂರು ಮಿತ್ರ ಪತ್ರಿಕೆಯ ಸಂಪಾದಕ ಕೆ.ಬಿ. ಗಣಪತಿ(85) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೈಸೂರು ಜಿಲ್ಲೆಯ ಹಿರಿಯ ಪತ್ರಕರ್ತರಾಗಿದ್ದ ಅವರು ಸುಮಾರು 5 ದಶಕಗಳಿಂದ ತಮ್ಮ ಪತ್ರಿಕೆಯ ಮೂಲಕ ರಾಜ್ಯಾದ್ಯಂತ ಪ್ರಸಿದ್ದರಾಗಿದ್ದರು.ಮೈಸೂರಿನ ಕೆ.ಸಿ . ಲೇಔಟ್‌ ನ ಅವರ ನಿವಾಸದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

1993 ಮತ್ತು 1995ರ ನಡುವೆ ಕರ್ನಾಟಕ ಪತ್ರಿಕಾ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದರು. 2001ರಲ್ಲಿ ಅವರಿಗೆ ಕರ್ನಾಟಕ ಪತ್ರಿಕಾ ಅಕಾಡೆಮಿ ಪ್ರಶಸ್ತಿ ನೀಡಲಾಯಿತು.

ಅವರು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷರೂ ಆಗಿದ್ದರು. ಸಾಹಿತಿಯೂ ಆಗಿದ್ದ ಕೆ.ಬಿ. ಗಣಪತಿ ಅವರು, ಕನ್ನಡದಲ್ಲಿ ʼಆದರ್ಶವಾದಿʼ ಎಂಬ ಕಾದಂಬರಿ ಇಂಗ್ಲಿಷ್‌ನಲ್ಲಿ ʼಅಮೇರಿಕಾ - ಆನ್ ಏರಿಯಾ ಆಫ್ ಲೈಟ್ʼ ಎಂಬ ಪ್ರವಾಸ ಕಥನ ಇಂಗ್ಲಿಷ್‌ನಲ್ಲಿ ʼದಿ ಕ್ರಾಸ್ ಅಂಡ್ ದಿ ಕೂರ್ಗ್ಸ್ʼ ಎಂಬ ಮತ್ತೊಂದು ಕಾದಂಬರಿ ಹಾಗೂ ಅಬ್ರಕಾಡಬ್ರಾ ಎಂಬ ಆಯ್ದ ಅಂಕಣಗಳ ಸಂಗ್ರಹದ ಕರ್ತೃವಾಗಿದ್ದಾರೆ.ಅಸಂಖ್ಯಾತ ಪತ್ರಕರ್ತರು ಹಾಗೂ ರಾಜಕಾರಣಿಗಳು ಗಣಪತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ