ಬೆಂಗಳೂರು: ಕೆಎಸ್ ಆರ್ ಪಿ, ಕೆಎಸ್‌ಐಎಸ್‌ಎಫ್, ಐಆರ್ ಬಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ.ಆಕ್ಷೇಪಣೆಗಳು ಇದಲ್ಲಿ ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು.
ದಾಖಲೆ ಅವಧಿ ಅಂದರೆ ಪರೀಕ್ಷೆ ನಡೆದು ಕೇವಲ ಐದು ದಿನಗಳಲ್ಲಿಯೇ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.
ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಓಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಲಾಗಿತ್ತು ಎಂದು ಅವರು ವಿವರಿಸಿದ್ದಾರೆ.


