LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Education News

ಇದೇ ಮೊದಲ ಬಾರಿಗೆ ಬಿ.ಎಡ್ ಪ್ರವೇಶಕ್ಕೆ KEA ಕೌನ್ಸೆಲಿಂಗ್ : ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ

Advertisement

ಬೆಂಗಳೂರು: ರಾಜ್ಯದ ಶೈಕ್ಷಣಿಕ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 2026-27ನೇ ಸಾಲಿನ ಎರಡು ವರ್ಷಗಳ ಬಿ.ಎಡ್ (B.Ed) ಕೋರ್ಸ್ ಪ್ರವೇಶಾತಿಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕೌನ್ಸೆಲಿಂಗ್ ನಡೆಸಲಿದೆ. 

ಸರ್ಕಾರದ ನಿರ್ದೇಶನದಂತೆ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಬಿ.ಎಡ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ಹಂಚಿಕೆಗಾಗಿ ಕೆಇಎ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ .

ಪ್ರವೇಶಾತಿ ಮತ್ತು ಸೀಟು ಹಂಚಿಕೆ ನಿಯಮ:

ನವೆಂಬರ್ 16, 2026ರಂದು ಸರ್ಕಾರ ಹೊರಡಿಸಿರುವ ಆದೇಶದ ಅನ್ವಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕೆಇಎ ಅಳವಡಿಸಿಕೊಂಡಿರುವ (2006ರ ಕಾಯ್ದೆ ಮತ್ತು ನಿಯಮಾವಳಿಗಳ) ಮಾನದಂಡಗಳಂತೆಯೇ ಬಿ.ಎಡ್ ಸೀಟು ಹಂಚಿಕೆ ಪ್ರಕ್ರಿಯೆಯನ್ನೂ ನಡೆಸಲಾಗುತ್ತದೆ. ಅಭ್ಯರ್ಥಿಗಳು ಪದವಿ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳನ್ನು ಗಣನೆಗೆ ತೆಗೆದುಕೊಂಡು ಮೆರಿಟ್ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಮುಖ ದಿನಾಂಕಗಳ ವೇಳಾಪಟ್ಟಿ:

ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ https://kea.kar.nic.in ನವೆಂಬರ್ 20ರಂದು ಇ-ಮಾಹಿತಿ ಪುಸ್ತಕವನ್ನು ಪ್ರಕಟಿಸಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಪ್ರಮುಖ ದಿನಾಂಕಗಳನ್ನು ನಿಗದಿಪಡಿಸಲಾಗಿದೆ.

ನವೆಂಬರ್ 20, 2026ರ ಅಪರಾಹ್ನ 12:00 ಗಂಟೆಯಿಂದ ನೋಂದಣಿ ಹಾಗೂ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. 

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 30, 2026ರ ರಾತ್ರಿ 11:59 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದ್ದು, ಅರ್ಜಿ ಶುಲ್ಕವನ್ನು ಪಾವತಿಸಲು ಡಿಸೆಂಬರ್ 2, 2026ರ ಸಂಜೆ 6:00 ಗಂಟೆ ಕೊನೆಯ ದಿನವಾಗಿರುತ್ತದೆ.

ಅಭ್ಯರ್ಥಿಗಳಿಗೆ ಸೂಚನೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿದ ನಂತರ ಅರ್ಜಿಯ ಮುದ್ರಿತ ಪ್ರತಿಯನ್ನು (Printout) ಕಡ್ಡಾಯವಾಗಿ ತೆಗೆದಿಟ್ಟುಕೊಳ್ಳಬೇಕು. 

ಈ ಎಲ್ಲಾ ಹಂತಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಮಾತ್ರ ಕೌನ್ಸೆಲಿಂಗ್ ಪ್ರಕ್ರಿಯೆಗೆ ಅರ್ಹತೆ ಪಡೆಯಲಿದ್ದಾರೆ. ಅರ್ಹತಾ ಕಂಡಿಕೆಗಳು ಮತ್ತು ಹೆಚ್ಚಿನ ಮಾಹಿತಿಗಾಗಿ ಕೆಇಎ ಅಧಿಕೃತ ವೆಬ್‌ಸೈಟ್ ಅಥವಾ ಸಹಾಯವಾಣಿ ಸಂಖ್ಯೆ (080-23460460) ಸಂಪರ್ಕಿಸುವಂತೆ ಪ್ರಾಧಿಕಾರ ಕೋರಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST