ಕೋಲ್ಕತ್ತಾ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಫಲಿತಾಂಶ ಹೆಚ್ಚಿನ ಕುತೂಹಲ ಕೆರಳಿಸಿದ್ದು, ಮೇ.೪ ರಂದು ಫಲಿತಾಂಶ ಬರುವವರೆಗೂ ತಮ್ಮ ಪಕ್ಷದ ಕಾರ್ಯಕರ್ತರು ಇವಿಎಂ ಸ್ಟಾçಂಗ್ ರೂಂ ಗಳ ಮೇಲೆ ತೀವ್ರ ನಿಗಾ ವಹಿಸಬೇಕೆಂದು ಪಶ್ಚಿಮ ಬಂಗಾಳ ಸಿಎಂ. ಮಮತಾ ಬ್ಯಾನರ್ಜಿ ಟಿಎಂಸಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಮಾಧ್ಯಮ ಸಮೀಕ್ಷೆಗಳನ್ನು ನಿರಾಕರಿಸಿರುವ ಮಮತಾ ಬ್ಯಾನರ್ಜಿ ಅವರು, ಟಿಎಂಸಿ ೨೨೬ ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೇ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಸಕಲ ಪ್ರಕ್ರಿಯೆಗಳ ಬಗ್ಗೆ ಪ್ರಶ್ನೆ ಮಾಡಿರುವ ಮಮತಾ ಅವರು ಟಿಎಂಸಿ ಕಾರ್ಯಕರ್ತರು ಫಲಿತಾಂಶದವರೆಗೆ ಇವಿಎಂಗಳ ಮೇಲೆ ನಿಗಾ ವಹಿಸುವಂತೆ ಕರೆ ನೀಡಿದ್ದಾರೆ. ಇದೇ ವೇಳೆ ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಿದ ಪಶ್ಚಿಮ ಬಂಗಾಳ ಮತದಾರರನ್ನು ಅವರು ಅಭಿನಂದಿಸಿದ್ದಾರೆ.

