Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಂತ ಕಾರು ಇದ್ದವರ ಬಿಪಿಎಲ್ ಕಾರ್ಡ್ ಗಳು ರದ್ದು : ಕೆ. ಎಚ್ ಮುನಿಯಪ್ಪ

Advertisement

ಶಿವಮೊಗ್ಗ: ಕೇಂದ್ರದ ನಿಯಮಾವಳಿಯಂತೆ ಆದಾಯ ತೆರಿಗೆ ಪಾವತಿದಾರರು, ಸ್ವಂತ ಕಾರು ಇದ್ದವರ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿ ಎಪಿಎಲ್ ಕಾರ್ಡ್ ನೀಡಲಾಗುವುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ 15ರಷ್ಟು ಬಿಪಿಎಲ್ ಕಾರ್ಡ್ ರದ್ದಾಗಲಿವೆ.

ಆದರೆ ಅರ್ಹರು ಆತಂಕ ಪಡುವುದು ಬೇಡ. ರಾಜ್ಯದಲ್ಲಿ ಒಂದೇ ಒಂದು ಬಿಪಿಎಲ್ ಕಾರ್ಡ್ ಕೂಡ ರದ್ದಾಗಲ್ಲ. ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದಾಗಲಿವೆ. ಅನರ್ಹರ ಕಾರ್ಡ್ ರದ್ದು ಮಾಡಿ ಎಪಿಎಲ್ ಕಾರ್ಡ್ ಮಾಡುತ್ತೇವೆ ಎಂಬುದಾಗಿ ತಿಳಿಸಿದರು.

ರಾಜ್ಯದಲ್ಲಿ ಶೇ.15ರಷ್ಟು ಬಿಪಿಎಲ್ ಕಾರ್ಡ್ ದಾರರರಷ್ಟೇ ರದ್ದು ಮಾಡಲಾಗಿದೆ. ಇದನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಕ್ಯಾನ್ಸಲ್ ಮಾಡಲಾಗಿದೆ. ಯಾವುದೇ ಫಲಾನುಭವಿಗಳಿಗೂ ಮೋಸವಾಗುತ್ತಿಲ್ಲ. ಶೀಘ್ರದಲ್ಲಿಯೇ ಎಣ್ಣೆ, ಬೇಳೆ, ಕಾಳುಗಳು ಸೇರಿದಂತೆ ಪೌಷ್ಟಿಕಾಂಶ ಆಹಾರ ಪದಾರ್ಥ ವಿತರಣೆ ಮಾಡಲಾಗುತ್ತದೆ ಎಂದರು.

ಪಡಿತರ ವಿತರಕರಿಗೆ ಮೇ ತಿಂಗಳಿಂದ ಕಮಿಷನ್ ಬಾಕಿ ಇದೆ ಎಂಬ ಪ್ರಶ್ನೆಗೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು ಸೇರಿಸಿ ಸೆಪ್ಟೆಂಬರ್ವರೆಗಿನ ಕಮಿಷನ್ ಕೊಡಲು ನಿರ್ಧರಿಸಿದೆ. ವಾರದೊಳಗೆ ಎಲ್ಲ ಪಡಿತರ ವಿತರಕರಿಗೆ ಕಮಿಷನ್ ನೀಡಲಿದ್ದೇವೆ ಎಂದರು.

ಇನ್ನು ಮುಂದೆ ಎಲ್ಲಾ ಪಡಿತರ ಅಂಗಡಿಗಳಲ್ಲೂ ಆಯಾ ತಿಂಗಳ 10ನೇ ತಾರೀಕು ಪಡಿತರ ನೀಡುವಂತೆ ಕ್ರಮವಹಿಸಲಾಗುವುದು. 'ಒನ್ ನೇಷನ್ ಒನ್ ಕಾರ್ಡ್' ಯೋಜನೆಯಡಿ ವಲಸಿಗ ಕಾರ್ಮಿಕರಿಗೂ ತಕ್ಷಣ ರೇಷನ್ ಕಾರ್ಡ್ ನೀಡಲಾಗುತ್ತದೆ ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ