LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕೆಪಿಎಸ್‌ಸಿ ನೇಮಕಾತಿ ಹಗರಣ : ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅಮಾನತು 

Advertisement

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಹಗರಣದ (KPSC Scam) ಆರೋಪ ಎದುರಿಸುತ್ತಿರುವ ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್‌ (Gyanendra Kumar) ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕೆಪಿಎಸ್‌ಸಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಈ ಕಠಿಣ ಕ್ರಮ ಕೈಗೊಂಡಿದೆ.

ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರು ಪ್ರಸ್ತುತ ಎಂಎಸ್‌ಎಂಇ (MSME) ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಿಐಡಿ ತನಿಖೆ ಪೂರ್ಣಗೊಳ್ಳುವವರೆಗೂ ಅಮಾನತು ಆದೇಶ ಮುಂದುವರಿಯಲಿದ್ದು, ಸರ್ಕಾರದ ಲಿಖಿತ ಅನುಮತಿ ಇಲ್ಲದೆ ಕೇಂದ್ರ ಸ್ಥಾನವನ್ನು (Headquarters) ಬಿಟ್ಟು ತೆರಳುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ

ಜಾರಿ ನಿರ್ದೇಶನಾಲಯ (ED) ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವುದು ಬೆಳಕಿಗೆ ಬಂದಿತ್ತು.

ಈ ಅಕ್ರಮಗಳ ನೇರ ಹೊಣೆ ಆಯೋಗದ ಪರೀಕ್ಷಾ ನಿಯಂತ್ರಕರಾಗಿದ್ದ ಜ್ಞಾನೇಂದ್ರ ಕುಮಾರ್ ಅವರ ಮೇಲಿದೆ ಎಂದು ಇಡಿ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಿದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ISRO ಮತ್ತೊಂದು ಅಭೂತಪೂರ್ವ ಸಾಧನೆ : ಇಒಎಸ್-05 ಯಶಸ್ವಿ ಉಡಾವಣೆ ಕೆಪಿಎಸ್‌ಸಿ ನೇಮಕಾತಿ ಹಗರಣ : ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅಮಾನತು ಗೌರಿ-ಗಣೇಶ ಹಬ್ಬ : 2,400 ವಿಶೇಷ ಹೆಚ್ಚುವರಿ ಬಸ್‌ಗಳನ್ನ ಓಡಿಸಲು ಸಕಲ ಸಿದ್ಧತೆಸ್ಮೃತಿ ಮಂದಾನಾ ಹೊಸ ವಿಕ್ರಮಸ್ಮೃತಿ ಮಂದಾನಾ ಭರ್ಜರಿ ಶತಕಅಮೆರಿಕದಲ್ಲಿ ಹಲ್ಲು ಕೀಳಿಸಲು ₹2.37 ಲಕ್ಷ ಬಿಲ್ : ಭಾರತವೇ ಬೆಸ್ಟ್ ಎಂದ ವ್ಯಕ್ತಿ ಶೈಕ್ಷಣಿಕ ವ್ಯವಸ್ಥೆ, ನೇಮಕಾತಿ ಪರೀಕ್ಷೆಯಲ್ಲಿ ಬದಲಾವಣೆ: ಸಂಪುಟ ಉಪಸಮಿತಿ ಮಹತ್ವದ ಚರ್ಚೆ20 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್ಬೈಕ್ ಸವಾರನ ಹೆಲ್ಮೆಟ್ ಒಡೆದು ಅಟ್ಟಹಾಸ: ಮಾಜಿ ಶಾಸಕ ತೆಲ್ಕೂರ ಸೇರಿ ಇಬ್ಬರ ವಿರುದ್ಧ FIR ಜಪಾನ್ ಏಶಿಯನ್ ಗೇಮ್ಸ್ ಗೇ ವಿವಿಎಸ್ ಲಕ್ಶ್ಮ ಣ್ ಟೀಮ್ ಇಂಡಿಯಾಗೇ ಹೆಡ್ ಕೋಚ್ ಸಾಧ್ಯತೆ