LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಜೆಪಿ ಆಂಗ್ಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ: ರಾಧಾಕೃಷ್ಣನ ವೇಷದಲ್ಲಿ ಸಂಭ್ರಮಿಸಿದ ಪುಟಾಣಿಗಳು

Advertisement

ತುರುವೇಕೆರೆ: ಪಟ್ಟಣದ ಗೆಳೆಯರ ಬಳಗ ಆಶ್ರಯದ ಜೆಪಿ ಕಾನ್ವೆಂಟ್ ಮತ್ತು ಆಂಗ್ಲ ಪ್ರೌಢಶಾಲೆಯಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಥೆಯ ಶೈಕ್ಷಣಿಕ ಆಡಳಿತಾಧಿಕಾರಿ ಕೃಷ್ಣಯ್ಯ ಮಾತನಾಡಿ, ಮಕ್ಕಳಿಗೆ ಶ್ರೀಕೃಷ್ಣನ ಬಾಲಲೀಲೆಗಳು,  ಧರ್ಮಪರವಾದ ನಿಲುವು, ಬಲರಾಮ ಕೃಷ್ಣರ ಸಹೋದರತ್ವ, ಕೃಷ್ಣ ಅರ್ಜುನರ ಬಾಂದವ್ಯ, ಮಹಾಭಾರತದಲ್ಲಿ  ಕೌರವರೊಂದಿಗಿನ ಕೃಷ್ಣನ ಸಂಧಾನ, ಕುರುಕ್ಷೇತ್ರ ಯುದ್ಧದಲ್ಲಿ ಭಗವದ್ಗೀತೆ ಬೋಧನೆ, ಧರ್ಮ ಸಂಸ್ಥಾಪನೆಯಲ್ಲಿ ಕೃಷ್ಣನ ಪಾತ್ರದ ಬಗ್ಗೆ ಕಥೆಗಳ ಮೂಲಕ ಸ್ವಾರಸ್ಯಕರ ರೀತಿಯಲ್ಲಿ ಮಕ್ಕಳಿಗೆ ತಿಳಿಸಿಕೊಟ್ಟರು.

ಗೆಳೆಯರ ಬಳಗದ ಕಾರ್ಯದರ್ಶಿ ಜಿ.ಆರ್.ರಂಗೇಗೌಡ ಅಧ್ಯಕ್ಷತೆ ವಹಿಸಿದ್ದರು. ಎಲ್.ಕೆ.ಜಿ. ಇಂದ ಒಂದನೇ ತರಗತಿವರೆಗಿನ ನೂರಾರು ಮಕ್ಕಳು ರಾಧಾಕೃಷ್ಣರ ವೇಷಭೂಷಣ ತೊಟ್ಟು ಸಂಭ್ರಮಿಸಿದರು.ಸಹಕಾರ್ಯದರ್ಶಿ ಲಕ್ಷ್ಮೀನರಸಿಂಹ, ನಿರ್ದೇಶಕರಾದ ಟಿಎವಿ ಗುಪ್ತ, ಬೆಂಜಮಿನ್ ಪಾಲ್, ಮುಖ್ಯ ಶಿಕ್ಷಕ ತುಕಾರಾಮ್, ಓಂಕಾರಮೂರ್ತಿ ಹಾಗೂ ಬೋಧಕ, ಬೋಧಕೇತರ ವರ್ಗ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್