Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆಯಲ್ಲಿ ಹೊತ್ತಿ ಉರಿದ ಕೆಎಸ್‌ಆರ್‌ಟಿಸಿ ಬಸ್ : 17 ಪ್ರಯಾಣಿಕರು ಸೇಫ್ 

Advertisement

ಹಾವೇರಿ : ಚಾಲಕನ ಸಮಯಪ್ರಜ್ಞೆಯಿಂದಾಗಿ ಭೀಕರ ಅಗ್ನಿ ದುರಂತವೊಂದು ತಪ್ಪಿದ್ದು, ಕೆಎಸ್‌ಆರ್‌ಟಿಸಿ ಪಲ್ಲಕ್ಕಿ ಬಸ್ಸಿನಲ್ಲಿದ್ದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಬಳಿ ಚಲಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದರಿಂದ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.

ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿಯ ‘ಪಲ್ಲಕ್ಕಿ’ ಸ್ಲೀಪರ್ ಬಸ್‌ಗೆ (KA-57-F6680) ಆಕಸ್ಮಿಕವಾಗಿ ಬೆಂಕಿ ತಗುಲಿದೆ.ಬಸ್ಸಿನಲ್ಲಿ ಸುಮಾರು 17 ಪ್ರಯಾಣಿಕರಿದ್ದರು.

 ಬಸ್ಸಿಗೆ ಬೆಂಕಿ ಹತ್ತಿಕೊಂಡಿದ್ದನ್ನು ತಕ್ಷಣವೇ ಗಮನಿಸಿದ ಚಾಲಕ ಪಕ್ಕೀರಪ್ಪ, ಕೂಡಲೇ ಬಸ್ಸನ್ನು ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಇದರಿಂದಾಗಿ ದೊಡ್ಡ ಅನಾಹುತ ತಪ್ಪಿದ್ದು, ಎಲ್ಲಾ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ಸಿನ ಬ್ರೇಕ್ ಲೈನ್‌ನಲ್ಲಿ ಉಂಟಾದ ತಾಂತ್ರಿಕ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ನೋಡನೋಡುತ್ತಿದ್ದಂತೆಯೇ ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸಿದ್ದು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. 

ಚಾಲಕ ಪಕ್ಕೀರಪ್ಪ ಬೆಂಕಿ ನಂದಿಸಲು ಹರಸಾಹಸ ಪಟ್ಟರಾದರೂ ಪ್ರಯೋಜನವಾಗಲಿಲ್ಲ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಘಟನೆ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೇ 07, 08 ರಂದು ಕೋಡಿನಾಗಸಂದ್ರದಲ್ಲಿ ಶ್ರೀ ವಿನಾಯಕ ಮಾರುತಿ ದೇವರ ಪ್ರತಿಷ್ಟಾಪನಾ ಮಹೋತ್ಸವಬಿಜೆಪಿ ಗೆಲುವು, ಜನತೆ ಅಭಿವೃದ್ದಿ ಪರವಾಗಿದ್ದಾರೆಂಬುದಕ್ಕೆ ಸಾಕ್ಷಿ : ಹರಳಕೆರೆ ಮಹಲಿಂಗಯ್ಯಪಶ್ಚಿಮ ಬಂಗಾಳ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಎನ್ ಡಿ ಎ ಮೈತ್ರಿ ಕೂಟ ಗೆಲುವು: ಮುಧೋಳನಲ್ಲಿ ಸಂಭ್ರಮಭೋಜವಾಡಿ ಗ್ರಾಮದ ಶ್ರೀ ಬಾಳು ಮಾಮಾ ದೇವಸ್ಥಾನಕ್ಕೆ ಸಂಸದರ ಭೇಟಿ.ರಾಜ್ಯದ ಮುಖ್ಯಮಂತ್ರಿಗಳಿಗೆ ವಿದ್ಯಾರ್ಥಿಗಳ ಆತ್ಮಹತ್ಯೆ ಕುರಿತು ಮುಖ್ಯಮಂತ್ರಿಗಳಿಗೆ ನೇರ ಎಚ್ಚರಿಕೆ : ರೈತ ಮುಖಂಡರಿಂದ  ಮೂರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪಟ್ಟಣದಲ್ಲಿ ಸಂಭ್ರಮ ಅಬಕಾರಿ ಅಧಿಕಾರಿಗಳ ದರ್ಪ : ಒಂಟಿ ಮಹಿಳೆ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಜಿಲ್ಲಾಯುವ  ಅಧ್ಯಕ್ಷ ಸ್ಥಾನ ಅಶೋಕ್ ನಾಯ್ಕ ವಜಾ ಹಿಂತೆಗೆಯಲು ಆಗ್ರಹದಾಖಲೆ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ : ಡಾಲರ್ ಎದುರು 20 ಪೈಸೆ ಕುಸಿತ ರಸ್ತೆಯಲ್ಲಿ ಹೊತ್ತಿ ಉರಿದ ಕೆಎಸ್‌ಆರ್‌ಟಿಸಿ ಬಸ್ : 17 ಪ್ರಯಾಣಿಕರು ಸೇಫ್