Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷನ ಮೇಲೆ ಹಲ್ಲೆಗೆ ಮಹೇಶ ಕುಮಟಳ್ಳಿ ಖಂಡನೆ

Advertisement
ಬೆಳಗಾವಿ:  ಬಿಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ್ದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆಂದು ಮಾಜಿ ಶಾಸಕ ಮಹೇಶ ಕುಮಠಳ್ಳಿ ಹೇಳಿದರು.

ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷ್ಯ ನಿಂಗಪ್ಪ ಕರೆಣ್ಣವರ ಮೇಲೆ ಹಲ್ಲೆ ನಡೆದ ಬಗ್ಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಮೊದಲು ಶಾಸಕ  ಲಕ್ಷ್ಮಣ ಸವದಿ ಅವರು ಅವರ ವಿರೋಧಿಗಳನ್ನು ಮೊದಲು ಯಾರಿಂದಾದರು ಹಲ್ಲೆ ಮಾಡಿಸುತ್ತಿದ್ದರು. ಈಗ ಅವರೇ ಮಾಡುತ್ತಿದ್ದಾರೆ. ಒಬ್ಬ ಶಾಸಕರಾಗಿ ಡಿಸಿಸಿ ಬ್ಯಾಂಕ್ ನೌಕರನ ಮೇಲೆ‌ ಹಲ್ಲೆ ಮಾಡಿದ್ದು ಖಂಡಿಸುತ್ತೇನೆ. ಅಥಣಿ ತಾಲೂಕು ಬಿಹಾರ ಆಗುತ್ತಿದೆ. ಯಾರು ಕಾನೂನು ಕೈಗೆತ್ತಿಕೊಂಡಿದ್ದಾರೆ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ತಮ್ಮ ಅಳಿಯನ ವರ್ಗಾವಣೆ ವಿಚಾರ ಸಂಬಂಧವೇ ಡಿಸಿಸಿ ಬ್ಯಾಂಕ್ ನೌಕರನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಈ ಮೊದಲು ಮಹಿಳೆಯರ ವರ್ಗಾವಣೆ ವಿಚಾರವಾಗಿ ಹಸ್ತಕ್ಷೇಪ ಮಾಡಿದ್ದಾರೆ. ಬಿಜೆಪಿ ಬೆಂಬಲಿಗರ ಕುಟುಂಬಕ್ಕೂ ಲಕ್ಷ್ಮಣ ಸವದಿ ತೊಂದರೆ ನೀಡಿದ್ದಾರೆ ಎಂದು ಆರೋಪಿಸಿದರು.

ಎಲ್ಲಾ ವಿಷಯ ಗೋಕಾಕದವರು ಪ್ರಚೋದನೆ ಮಾಡಿದ್ದಾರೆ ಅಂತಾರೇ, ಶಾಸಕ ಸವದಿ ಅವರಿಗೆ ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷ್ಯ ನಿಂಗಪ್ಪ ಕರೆಣ್ಣವರ ಮನೆಗೆ ಬಂದಾಗ ಗೋಕಾಕದವರು  ಹಲ್ಲೆ ಮಾಡು ಅಂತಾ ಹೇಳಿದ್ದರಾ?. ಒಬ್ಬ ಶಾಸಕನಾದವನಿಗೆ ತಮ್ಮದೇ ಆದ ಜವಾಬ್ದಾರಿಗಳು ಇರುತ್ತವೆ. ಜವಾಬ್ದಾರಿ ಮೆರೆತು ವರ್ತಿಸಬಾರದು ಎಂದು ಸವದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ