ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಹೆಚ್.ಡಿ. ಚೆನ್ನಮ್ಮನವರ ಅಂತ್ಯಕ್ರಿಯೆಯು ಹಾಸನದಲ್ಲಿ ಭಾವುಕ ವಾತಾವರಣದ ನಡುವೆ ಶಾಸ್ತ್ರೋಕ್ತವಾಗಿ ನೆರವೇರಿತು.
ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಸಾರ್ವಜನಿಕರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಅಂತಿಮ ವಿಧಿವಿಧಾನಗಳನ್ನು ಪೂರೈಸಲಾಯಿತು.
ಈ ವೇಳೆ ಪುತ್ರ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ತಾಯಿಯ (Chennamma) ಪಾರ್ಥಿವ ಶರೀರಕ್ಕೆ ಮುತ್ತಿಟ್ಟು ಕಣ್ಣೀರು ಹಾಕಿದ ದೃಶ್ಯ ನೆರೆದಿದ್ದವರ ಒಡಲು ತುಂಬಿ ಬರುವಂತೆ ಮಾಡಿತು.
ಸಾಗರೋಪಾದಿಯಲ್ಲಿ ಹರಿದುಬಂದಿದ್ದ ಜನ
ಅಗಲಿದ ಹಿರಿಯ ಜೀವಕ್ಕೆ ಕಡೆ ನಮನ ಸಲ್ಲಿಸಲು ಹಾಸನದ ಅಂತ್ಯಕ್ರಿಯೆ ಸ್ಥಳಕ್ಕೆ ಸಾರ್ವಜನಿಕರು ಹಾಗೂ ಕಾರ್ಯಕರ್ತರು ಸಾಗರೋಪಾದಿಯಲ್ಲಿ ಹರಿದುಬಂದಿದ್ದರು.
ಜನದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ದರ್ಶನಕ್ಕೆ ಅನುಕೂಲವಾಗುವಂತೆ ಬ್ಯಾರಿಕೇಡ್‌ಗಳನ್ನು ಅಳವಡಿಸಿ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ರಾಷ್ಟ್ರೀಯ ಹೆದ್ದಾರಿ 373ರ ಮಾರ್ಗವಾಗಿ ಬರುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಪೊಲೀಸರು ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು.


