LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News | Politics News

ಕೇಂದ್ರ ಸಚಿವ ಸ್ಥಾನಕ್ಕೆ ಎಲ್. ಮುರುಗನ್ ರಾಜೀನಾಮೆ ಘೋಷಣೆ

Advertisement

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಎಲ್. ಮುರುಗನ್ ಅವರು ಮಂಗಳವಾರ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.

ತಳಮಟ್ಟಕ್ಕೆ ಮರಳಿ ಪಕ್ಷದ ಕಾರ್ಯಕರ್ತರೊಂದಿಗೆ ಕೆಲಸ ಮಾಡುವ ಮೂಲಕ ತಮಿಳುನಾಡಿನಲ್ಲಿ ಬಿಜೆಪಿಯನ್ನು ಬಲಪಡಿಸಲು ಬಯಸಿರುವುದಾಗಿ ಅವರು ತಿಳಿಸಿದ್ದಾರೆ.

ಎಲ್. ಮುರುಗನ್ ಅವರು ಕೇಂದ್ರ ಸರ್ಕಾರದಲ್ಲಿ ಸಂಸದೀಯ ವ್ಯವಹಾರಗಳು ಹಾಗೂ ಮಾಹಿತಿ ಮತ್ತು ಪ್ರಸಾರ ಖಾತೆಗಳ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾಗಿದ್ದ ಎಲ್. ಮುರುಗನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ಮತ್ತು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಮತ್ತೆ ಪಕ್ಷದ ತಳಮಟ್ಟಕ್ಕೆ ಮರಳಿ ಕೆಲಸ ಮಾಡಲು ಬಯಸಿರುವುದಾಗಿ ತಿಳಿಸಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್' (ಎಲ್ಲರ ಸಹಕಾರ, ಎಲ್ಲರ ಅಭಿವೃದ್ಧಿ, ಎಲ್ಲರ ವಿಶ್ವಾಸ) ಎಂಬ ಸಂದೇಶವನ್ನು ತಮಿಳುನಾಡಿನಾದ್ಯಂತ ಜನರಿಗೆ ತಲುಪಿಸಲು ಉದ್ದೇಶಿಸಿರುವುದಾಗಿ ಹೇಳಿದ್ದಾರೆ.

ಇದರೊಂದಿಗೆ, 2029ರ ಲೋಕಸಭೆ ಚುನಾವಣೆಗೆ ಬಿಜೆಪಿಯನ್ನು ಸಜ್ಜುಗೊಳಿಸಲು ಮತ್ತು ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸಲು ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.

ಎಲ್. ಮುರುಗನ್ ಅವರು 2021ರಲ್ಲಿ ಮೊದಲ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ನಂತರ 2024ರಲ್ಲಿ ಎರಡನೇ ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. 

ರಾಜ್ಯಸಭೆ ಸದಸ್ಯತ್ವ ಹಾಗೂ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರ ಮುಂದಿನ ರಾಜಕೀಯ ನಡೆ ಇದೀಗ ಗಮನ ಸೆಳೆದಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐದು ವರ್ಷ ಪ್ರೀತಿ, ಮತ್ತೊಬ್ಬನ ಜೊತೆ ಮದುವೆ ನಿಶ್ಚಯ : ಪ್ರೇಯಸಿಯನ್ನ ಕೊಂದ ಪ್ರೇಮಿ ನಂದಿಹಾಳ ಹಳ್ಳಕ್ಕೆ ನೀರು ಹರಿಸುವಂತೆ ಗ್ರಾಮಸ್ಥರಿಂದ ತಹಶೀಲ್ದಾರ್ ರವರಿಗೆ ಮನವಿಬಾಂಗ್ಲಾದೇಶ- ಆಪಘಾನಿಸ್ತಾನ್ ಟೆಸ್ಟ್ ಡ್ರಾ ದಲ್ಲಿ ಅಂತ್ಯ ಕೇಂದ್ರ ಸಚಿವ ಸ್ಥಾನಕ್ಕೆ ಎಲ್. ಮುರುಗನ್ ರಾಜೀನಾಮೆ ಘೋಷಣೆಸಿಡಿ ತೋರಿಸಿ ಸಿದ್ದರಾಮಯ್ಯರಿಂದ ರಾಜೀನಾಮೆ ಪಡೆಯಲಾಗಿದೆ: ಯತ್ನಾಳ್ ಸ್ಟಿಂಗ್ ಆಪರೇಷನ್ ವಿಡಿಯೋಗೂ ನನಗೂ ಸಂಬಂಧವಿಲ್ಲ : ಸಿದ್ದರಾಮಯ್ಯ ಸೋಲಿನಿಂದ ಪಾರಾಗಲು ಕರ್ನಾಟಕ ಹೋರಾಟ ಚಿತ್ರದುರ್ಗದ ಉಕ್ಕಿನ ಕೋಟೆ ರಕ್ಷಿಸಿದ ವೀರ ಮದಕರಿ ನಾಯಕ: ಶಿವರಾಜ ಸಾಹುಕಾರವ್ಯಕ್ತಿಯೊಬ್ಬರಿಗೆ ಡಿಜಿಟಲ್ ಅರೆಸ್ಟ್ : ಬರೋಬ್ಬರಿ 1.31 ಕೋಟಿ ರೂಪಾಯಿ ವಂಚನೆಬೆಳಗಾವಿ, ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರ ಕಿಚ್ಚು : ಹೆದ್ದಾರಿ ಬಂದ್ ಮಾಡಿ ಆಕ್ರೋಶ