LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಎಂಎಸ್‌ಪಿ ಆಗ್ರಹ ಯಥನಾಲ್ ಖರೀದಿಸದ ಕೇಂದ್ರದ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ಅಸಮಾಧಾನ

ಸಕ್ಕರೆ ಕಾರ್ಖಾನೆಗಳ ಸಂಕಷ್ಟಕ್ಕೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಮುಂದಾಗಲಿ; ಮಾತುಕತೆಯಿಂದ ಸಮಸ್ಯೆ ಬಗೆಹರಿಸುವ ವಿಶ್ವಾಸ

Advertisement

ಬೆಳಗಾವಿ : ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಆರ್ಥಿಕ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಹೆಚ್ಚಳ ಮಾಡದಿರುವುದು ಹಾಗೂ ಎಥನಾಲ್ ಖರೀದಿಯನ್ನು ಸಮರ್ಪಕವಾಗಿ ಮಾಡದಿರುವ ಕೇಂದ್ರ ಸರ್ಕಾರದ ಧೋರಣೆ ಸಕ್ಕರೆ ಉದ್ಯಮದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸಕ್ಕರೆ ಕಾರ್ಖಾನೆಗಳು ಪ್ರಸ್ತುತ ಹಲವು ಸವಾಲುಗಳನ್ನು ಎದುರಿಸುತ್ತಿವೆ. ಕಾರ್ಖಾನೆ ಮಾಲೀಕರ ಸಮಸ್ಯೆಗಳನ್ನು ಸರ್ಕಾರ ಸೂಕ್ಷ್ಮವಾಗಿ ಗಮನಿಸಿ, ಅವರ ಸಂಕಷ್ಟಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕಾರ್ಖಾನೆಗಳ ಆರ್ಥಿಕ ಸ್ಥಿತಿ ಚಿಂತಾಜನಕ

2010ಕ್ಕೂ ಮೊದಲು ಆರಂಭವಾದ ಹಲವು ಸಕ್ಕರೆ ಕಾರ್ಖಾನೆಗಳು ಆರ್ಥಿಕವಾಗಿ ಸ್ಥಿರವಾಗಿವೆ. ಆದರೆ, ಆನಂತರ ಆರಂಭವಾದ ಬಹುತೇಕ ಕಾರ್ಖಾನೆಗಳು ವಿವಿಧ ಕಾರಣಗಳಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಉತ್ಪಾದನಾ ವೆಚ್ಚ, ಸಕ್ಕರೆ ಮಾರಾಟ ಬೆಲೆ ಸೇರಿದಂತೆ ಹಲವು ಅಂಶಗಳು ಕಾರ್ಖಾನೆಗಳ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತಿವೆ ಎಂದರು.

ಸಕ್ಕರೆ ಉದ್ಯಮದಲ್ಲಿ ಎದುರಾಗಿರುವ ಸಮಸ್ಯೆಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಕಾರ್ಖಾನೆಗಳ ನಿರ್ವಹಣೆ, ಆರ್ಥಿಕ ಸ್ಥಿರತೆ ಹಾಗೂ ಉದ್ಯಮದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಕಾರ್ಖಾನೆ ಮಾಲೀಕರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳ ಮೂಲವನ್ನು ಗುರುತಿಸಿ ಪರಿಹಾರ ಕಂಡುಕೊಳ್ಳುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.

ಸಕ್ಕರೆಯ ಎಂಎಸ್‌ಪಿ ಹೆಚ್ಚಳಕ್ಕೆ ಒತ್ತಾಯ

ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಹೆಚ್ಚಳವಾಗಬೇಕು ಎಂಬುದು ಸಕ್ಕರೆ ಉದ್ಯಮದ ಪ್ರಮುಖ ಬೇಡಿಕೆಯಾಗಿದೆ. ಆದರೆ, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳುತ್ತಿಲ್ಲ ಎಂಬ ಅಸಮಾಧಾನವನ್ನು ಲಕ್ಷ್ಮೀ ಹೆಬ್ಬಾಳ್ಕರ್ ವ್ಯಕ್ತಪಡಿಸಿದರು.

ಸಕ್ಕರೆಯ ಕನಿಷ್ಠ ಮಾರಾಟ ಬೆಲೆ ಹೆಚ್ಚಳವಾದರೆ ಕಾರ್ಖಾನೆಗಳಿಗೆ ಆರ್ಥಿಕವಾಗಿ ನೆರವಾಗಬಹುದು. ಉದ್ಯಮದ ವಿವಿಧ ವೆಚ್ಚಗಳನ್ನು ನಿಭಾಯಿಸಲು ಹಾಗೂ ಕಾರ್ಖಾನೆಗಳ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಬೆಲೆ ಪರಿಷ್ಕರಣೆ ಅಗತ್ಯವಾಗಿದೆ ಎಂಬುದು ಉದ್ಯಮದ ವಲಯದಲ್ಲಿ ಕೇಳಿಬರುತ್ತಿರುವ ಪ್ರಮುಖ ಬೇಡಿಕೆಯಾಗಿದೆ.

ಆದರೆ, ಎಂಎಸ್‌ಪಿ ಹೆಚ್ಚಳದ ವಿಚಾರದಲ್ಲಿ ಕೇಂದ್ರ ಸರ್ಕಾರದಲ್ಲಿಯೇ ಗೊಂದಲವಿದ್ದು, ಈ ಕುರಿತು ಸ್ಪಷ್ಟ ನಿರ್ಧಾರ ಹೊರಬೀಳಬೇಕಿದೆ ಎಂದು ಅವರು ಹೇಳಿದರು.

ವರದಿ :ರಾಜು ಮುಂಡೆ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸುಕ್ಷೇತ್ರ ಸಿದ್ದನಕೊಳ್ಳ ಕಲಾಪೋಷಕರ ಹಾಗೂ ನಿರಂತರ ದಾಸೋಹ ಮಠಕ್ಕೆ :  ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಬಸವರಾಜ ಆಗ್ರಹ ಕ್ಯಾನ್ಸರ್ ರೋಗಿಗಳಿಗೆ ಸಿಹಿಸುದ್ದಿ : ಔಷಧಿಗಳ ಬೆಲೆ ಶೇ.70ರಷ್ಟು ಕಡಿತವಿಚ್ಛೇದನಕ್ಕೆ ಒಪ್ಪಲಿಲ್ಲವೆಂದು ಪತ್ನಿಯನ್ನೇ ಬೆಂಕಿ ಹಚ್ಚಿ ಕೊಂದ ಪಾಪಿ ಪತಿತ್ರಿಕೋನ ಏಕದಿನ ಸರಣಿ: ಪಾಕಿಸ್ತಾನ- ಶ್ರೀಲಂಕಾ ಪಂದ್ಯ ಇಂದು ಬೈಲ್ ಮರ್ಚೆಡ್ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಂಭ್ರಮದಿಂದ ಆಚರಣೆಎಂಎಸ್‌ಪಿ ಆಗ್ರಹ ಯಥನಾಲ್ ಖರೀದಿಸದ ಕೇಂದ್ರದ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ಅಸಮಾಧಾನದ. ಆಪ್ರಿಕಾ- ಆಸ್ಟ್ರೇಲಿಯಾ ನಿರ್ಣಾಯಕ ಟೆಸ್ಟ್ ಇಂದಿನಿಂದ ಭಾರತ- ಕಿವೀಸ್ 3 ನೇ ಟಿ-20 ಪಂದ್ಯ ಇಂದು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ : ಇಂದು ಮತ ಎಣಿಕೆ ಅಯೋಧ್ಯೆ ರಾಮಮಂದಿರ : ದರ್ಶನದ ಸಮಯದಲ್ಲಿ ಮಹತ್ವದ ಬದಲಾವಣೆ