Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅವರ ರಾಜಕೀಯಕ್ಕೆ ರಾಜಕೀಯವಾಗಿಯೇ ಉತ್ತರಿಸುತ್ತೇವೆ - ಲಕ್ಷ್ಮೀ ಹೆಬ್ಬಾಳಕರ್

Advertisement
ಬೆಳಗಾವಿ :-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅವರು ರಾಜಕೀಯವಾಗಿ ಈ ಪ್ರಕರಣವನ್ನು ಬಳಸುತ್ತಿದ್ದಾರೆ, ನಾವೂ ರಾಜಕೀಯವಾಗಿ ಉತ್ತರಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಅದರ ವರದಿಯೇ ಬಂದಿಲ್ಲ. ಈಗಲೇ ತಮ್ಮ ಸಂವಿಧಾನಿಕ ಪವರ್ ನ್ನು ದುರುಪಯೋಗಪಡಿಸಿಕೊಂಡು ಈ ರೀತಿ ಮಾಡಲಾಗಿದೆ ಎಂದು ಆರೋಪಿಸಿದರು.

ಮುಂದೆ ಬಂಧನವಾದರೆ ರಾಜಿನಾಮೆ ನೀಡಬೇಕಾಗುತ್ತದೆಯಲ್ಲವೇ ಎನ್ನುವ ಪ್ರಶ್ನೆಗೆ, ಊಹಾಪೋಹದ ಪ್ರಶ್ನೆಗಳಿಗೆಲ್ಲ ನಾನು ಉತ್ತರಿಸುವುದಿಲ್ಲ. ರಾಷ್ಟ್ರದಲ್ಲಿ ಬಿಜೆಪಿಯೇತರ ಪಕ್ಷಗಳ ಸರಕಾರ ಬಂದಾಗಲೆಲ್ಲ ಈ ರೀತಿ ಕಾಡಿಸುವುದು ಹಿಂದಿನಿದಂಲೂ ನಡೆಯುತ್ತಲೇ ಇದೆ. ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು, ಮಂತ್ರಿಗಳೂ ಮುಖ್ಯಮಂತ್ರಿಗಳ ಬೆನ್ನಿಗೆ ನಿಂತಿದ್ದೇವೆ. ಅವರು ರಾಜಿನಾಮೆ ಕೊಡುವ ಪ್ರಶ್ನೆ ಇಲ್ಲ. ಅವರ ರಾಜಕೀಯಕ್ಕೆ ನಾವೂ ರಾಜಕೀಯವಾಗಿಯೇ ಉತ್ತರ ನೀಡುತ್ತೇವೆ ಎಂದು ಹೆಬ್ಬಾಳಕರ್ ತಿಳಿಸಿದರು.

ಅಂದಿನ ಯಡಿಯೂರಪ್ಪ ಪ್ರಕರಣಕ್ಕೂ ಇದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಆಗ ಬಿಜೆಪಿಯವರದ್ದೇ ಸರಕಾರವಿತ್ತು. ಅವರ ಪಕ್ಷದವರೇ ಅವರ ಬೆನ್ನಿಗೆ ಚೂರಿ ಹಾಕಿ ಜೈಲಿಗೆ ಕಳಿಸಿದ್ದಾರೆ. ಇದು ಆ ರೀತಿಯ ಪ್ರಕರಣವಲ್ಲ. ಈ ಪ್ರಕರಣದ ಕುರಿತು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಪಕ್ಷ ಶಿಸ್ತಿನ ಪಕ್ಷ. ರಾಜಕೀಯವಾಗಿ ಮುಖ್ಯಮಂತ್ರಿಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ. 40 ವರ್ಷದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ ಮಾಡಿದವರು ಸಿದ್ದರಾಮಯ್ಯನವರು. ಅವರ ಮುಖಕಕ್ಕೆ ಮಸಿ ಬಳಿಯಲು ಹೋದವರ ಕೈಗೆ ಮೊದಲು ಮಸಿ ಬಳಿದಿದೆ. ಜನರು ಅವರನ್ನು ಕ್ಷಮಿಸುವುದಿಲ್ಲ. ಈ ರಾಜ್ಯದ ಜನರು 5 ವರ್ಷ ಸುಭದ್ರ ಆಡಳಿತ ನಡೆಸಲು ಆಶಿರ್ವಾದ ಮಾಡಿದ್ದಾರೆ. ನಾವು 5 ವರ್ಷ ಆಡಳಿತ ಮಾಡುತ್ತೇವೆ ಎಂದು ಸಚಿವರು ತಿಳಿಸಿದರು.

ವರದಿ:- ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ