Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇನ್ಮುಂದೆ ಶಿಕ್ಷಣ, ಕೈಗಾರಿಕೆಗೆ ಜಮೀನು ಖರೀದಿ ಅನುಮತಿ ಡಿಸಿ ಕೈಯಲ್ಲಿ : ವಿಧೇಯಕ ಮಂಡನೆ 

Advertisement
ಬೆಂಗಳೂರು: ಖಾಸಗಿ ವ್ಯಕ್ತಿಗಳ ಕೃಷಿ ಜಮೀನನ್ನು ಶಿಕ್ಷಣ ಸಂಸ್ಥೆಗಳು ಅಥವಾ ಸಣ್ಣ ಉದ್ದಿಮೆ/ಕೈಗಾರಿಕೆಗಳಿಗೆ ಖರೀದಿಸಲು ಸೆಕ್ಷನ್‌ 109ರ ಅಡಿಯಲ್ಲಿ ಈ ಹಿಂದೆಯೇ ಅನುಮತಿ ನೀಡಲಾಗಿದೆ.

ಆದರೆ, ಆ ಅನುಮತಿಗಾಗಿ ಅವರು ಸರ್ಕಾರ ಮುಖ್ಯ ಕಾರ್ಯದರ್ಶಿ ವರೆಗೆ ಬರುವಂತಿದೆ.ಈಗಿನ ನೂತನ ತಿದ್ದುಪಡಿಯಲ್ಲಿ ಆ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೇ ನೀಡಲಾಗಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ವಿಧಾನಸಭಯಲ್ಲಿ ಸದಸ್ಯರ ಪ್ರಶ್ನೆಗೆ ಉತ್ತರಿಸಿದಂತ ಅವರು, ಸಣ್ಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳೇ 4 ಹೆಕ್ಟೇರ್‌ ವರೆಗಿನ ಭೂಮಿ ಖರೀದಿಗೆ ಅನುಮತಿ ನೀಡಬಹುದು. ಹೀಗೆ ನೀಡುವ ಅನುಮತಿ ಆಟೋಮ್ಯಾಟಿಕ್ ಭೂ-ಪರಿವರ್ತನೆಯಾಗಿರುತ್ತದೆ.‌

ಇದಲ್ಲದೆ, ಈ ಹಿಂದೆ ಸಣ್ಣ ಉದ್ದಿಮೆದಾರರು/ಶಿಕ್ಷಣ ಸಂಸ್ಥೆಗಳು ಭೂಮಿಯನ್ನು ಏನೋ ಉದ್ದೇಶಕ್ಕೆ ತಗೊಂಡು ಇನ್ನೇನೋ ಉದ್ದೇಶಕ್ಕೆ ಬಳಸಲೂ ಸಹ ನಮ್ಮ ಬಳಿ ಅನುಮತಿ ಕೇಳುತ್ತಾರೆ. ಆದರೆ, ಅದಕ್ಕೆ ಅನುಮತಿ ನೀಡುವುದು ಅವಕಾಶ ಇರಲಿಲ್ಲ. ಪ್ರಸ್ತುತ ಅದಕ್ಕೂ ಅವಕಾಶ ನೀಡಲಾಗಿದೆ ಎಂದರು.

ಕರ್ನಾಟಕದಲ್ಲಿ ಎಲ್ಲೇ ಆಗಲಿ 2 ಎಕರೆ ವರೆಗೆ ಕೈಗಾರಿಗೆ ಮಾಡಲು ಪರಿವರ್ತನೆಗೆ ವಿನಾಯಿತಿ ನೀಡಲಾಗುತ್ತದೆ. ಸಣ್ಣ ಉದ್ದಿಮೆದಾರರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ತಿದ್ದುಪಡಿಯನ್ನು ತರಲಾಗಿದೆ.

ನವೀಕರಿಸಬಹುದಾದ ಇಂಧನ ಕ್ಷೇತ್ರ ಪ್ರಸ್ತುತ ಉದಯೋನ್ಮುಖ ವಲಯ. ದೇಶದ ಆದ್ಯತೆ ಕಲ್ಲಿದ್ದಲಿಂದ ನವೀಕರಿಸಬಹುದಾದ ಇಂಧನ ಕ್ಷೇತ್ರದ ಕಡೆ ಬದಲಾಗಬೇಕು ಎಂಬುದು ಸರ್ಕಾರದ ಹಾಗೂ ಜನ ಸಾಮಾನ್ಯರ ಆದ್ಯತೆ.

ಸೋಲಾರ್, ಪವನ ಶಕ್ತಿ ಘಟಕ ಸ್ಥಾಪಿಸಲು ಅನುಮತಿ ಕೊಡಿಸುವ ನೆಪದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂಬುದಾಗಿ ಕಳವಳ ವ್ಯಕ್ತ ಪಡಿಸಿದರು.

ಇದರಿಂದ ಸಣ್ಣ ಉದ್ದಿಮೆದಾರರು ಮಧ್ಯವರ್ತಿಗಳ ಕಾಟಕ್ಕೆ ಬೇಸತ್ತಿದ್ದರೆ, ಸೋಲಾರ್ ಹಾಗೂ ಪವನ ಶಕ್ತಿ ವಿಂಡ್ ಮಿಲ್ ಸ್ಥಾಪಿಸುವ ಉದ್ದಿಮೆದಾರರ ಬಂಡವಾಳ ಹೂಡಿಕೆಯೂ ಕಡಿಮೆಯಾಗುತ್ತಿದೆ. ಹೀಗಾಗಿ ಮಧ್ಯವರ್ತಿಗಳ ಉಪಟಳ ತಪ್ಪಿಸಿ ಬಂಡವಾಳ ಹೆಚ್ಚಿಸುವ ಸಲುವಾಗಿ ಆಟೋ ಕನ್‌ವರ್ಷನ್‌ಗೆ ಅವಕಾಶ ನೀಡಲಾಗಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಒತ್ತಾಯವೂ ಇತ್ತು. ಹೀಗಾಗಿ ಬಹಳ ದಿನಗಳ ಚರ್ಚೆಯ ನಂತರ ಕಾನೂನಿನಲ್ಲಿ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ