Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ HPV ಲಸಿಕೆ ಅಭಿಯಾನಕ್ಕೆ ಚಾಲನೆ

Advertisement
ನಿಡಗುಂದಿ : ಗರ್ಭಕಂಠಕ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದಿಂದ ಹೆಣ್ಣು ಮಕ್ಕಳಿಗೆ ನೀಡಲಾಗುವ HPV ಲಸಿಕೆ ಅಭಿಯಾನಕ್ಕೆ ನಿಡಗುಂದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಾಲನೆ ನೀಡಲಾಯಿತು.


14 ರಿಂದ 15 ವರ್ಷದ ಹೆಣ್ಣು ಮಕ್ಕಳಿಗೆ ನೀಡಲಾಗುವ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮವನ್ನು ವೈದ್ಯಾಧಿಕಾರಿಣಿ ಡಾ. ಮಲ್ಲಮ್ಮ ರೆಡ್ಡಿ ಅವರು ಚಾಲನೆ ನಿಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, 14 ರಿಂದ 15 ವರ್ಷದ ಎಲ್ಲಾ ಹೆಣ್ಣು ಮಕ್ಕಳು ಕಡ್ಡಾಯವಾಗಿ ಈ ಲಸಿಕೆಯನ್ನು ಪಡೆಯಬೇಕು. ಈ ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಗರ್ಭಕಂಠಕ ಕ್ಯಾನ್ಸರ್‌ನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು ಎಂದು ತಿಳಿಸಿದರು. ಸಾರ್ವಜನಿಕರು ಈ ಬಗ್ಗೆ ಅರಿವು ಪಡೆದುಕೊಂಡು ತಮ್ಮ ಮಕ್ಕಳನ್ನು ಸಮೀಪದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದು ಲಸಿಕೆ ಪಡೆಯುವಂತೆ ಮನವಿ ಮಾಡಿದರು.

ಲಸಿಕೆಯನ್ನು ಮೊದಲಿಗೆ ಅಂಜನ ಎಸ್. ಕೋಳಕಾರ್ ಮತ್ತು ಮಾನಸಾ ಅವರು ಪಡೆದುಕೊಂಡರು.
ಈ ಕಾರ್ಯಕ್ರಮದಲ್ಲಿ ಡಾ. ಶಿವಾನಂದ, ಆರ್.ಬಿ. ಮಾಶೆಟ್ಟಿ, ಸಂತೋಷ್ ನಿಂಬರಗಿ, ಗೌರಮ್ಮ ನಾಗರಾಳ, ಸವಿತಾ, ಕಂಡೆಪ್ಪ, ಕಾಸಿಂ.ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ವರದಿ :ಅಲಿ ಮಕಾನದಾರ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್