Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೋಲಿಯೋ ಮುಕ್ತ ಸಮಾಜಕ್ಕಾಗಿ ಲಸಿಕಾ ಅಭಿಯಾನಕ್ಕೆ ಚಾಲನೆ

Advertisement
ಚೇಳೂರು: ತಾಲೂಕಿನ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭಾಸ್ಕರ್ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಡಾ. ಭಾಸ್ಕರ್ ಅವರು, ಡಿಸೆಂಬರ್ 21 ರಿಂದ 23 ರವರೆಗೆ ಮೂರು ದಿನಗಳ ಕಾಲ ಈ ಅಭಿಯಾನ ನಡೆಯಲಿದೆ. ಚೇಳೂರು ವ್ಯಾಪ್ತಿಯಲ್ಲಿ ಸುಮಾರು 2,050 ಮಕ್ಕಳನ್ನು ಗುರಿಯಾಗಿಟ್ಟುಕೊಳ್ಳಲಾಗಿದ್ದು, ಮೊದಲ ದಿನ ಬೂತ್‌ಗಳಲ್ಲಿ ಲಸಿಕೆ ಹಾಕಲಾಗುತ್ತಿದೆ. ಇಂದಿನ ಬೂತ್ ಮಟ್ಟದ ಅಭಿಯಾನದಲ್ಲಿ ಶೇ. 70 ರಷ್ಟು ಪ್ರಗತಿ ಸಾಧಿಸುವ ನಿರೀಕ್ಷೆಯಿದೆ ಎಂದರು.

ಬೂತ್‌ಗಳಲ್ಲಿ ಲಸಿಕೆ ಪಡೆಯಲು ಸಾಧ್ಯವಾಗದ ಮಕ್ಕಳಿಗಾಗಿ ಮುಂದಿನ ಎರಡು ದಿನಗಳ ಕಾಲ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಲಿದ್ದಾರೆ. ತಾಲೂಕಿನಾದ್ಯಂತ ಈ ಅಭಿಯಾನ ಯಶಸ್ವಿಗೊಳಿಸಲು 22 ಅಂಗನವಾಡಿ ಕಾರ್ಯಕರ್ತೆಯರು, 18 ಆಶಾ ಕಾರ್ಯಕರ್ತೆಯರು, 5 ಪಬ್ಲಿಕ್ ಹೆಲ್ತ್ ಸೂಪರ್‌ವೈಸರ್‌ಗಳು ಹಾಗೂ 3 ಸಮುದಾಯ ಆರೋಗ್ಯ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ, ಎಂದು ಅವರು ಮಾಹಿತಿ ನೀಡಿದರು.

ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಪೋಷಕರು ಸಹಕರಿಸಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಕೇಂದ್ರದ ಸಿಬ್ಬಂದಿ,ಮಂಜುಳ, ಲೀಲಾವತಿ ಗೌತಮಿ, ಅಂಗನವಾಡಿ ಕಾರ್ಯಕರ್ತೆ ಶಿಲ್ಪ, ಕವಿತ, ನಾರಾಯಣಮ್ಮ, ಲಕ್ಷ್ಮೀನರಸಮ್ಮ,. ಆಶಾ ಕಾರ್ಯಕರ್ತೆಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

ವರದಿ :ಯಾರಬ್. ಎಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ