LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಕೀಲರು ನಿಯಮಿತ ಆರೋಗ್ಯ ತಪಾಸಣೆಗೆ ಆದ್ಯತೆ ನೀಡಲಿ: ನ್ಯಾಯಾಧೀಶ ಕಂಚಿ ಮಾಯಣ್ಣ ಗೌತಮ್

Advertisement

ಮಾನ್ವಿ:ಕಕ್ಷಿದಾರರಿಗೆ ನ್ಯಾಯ ಒದಗಿಸುವ ಜವಾಬ್ದಾರಿಯೊಂದಿಗೆ ನಿರಂತರವಾಗಿ ವೃತ್ತಿಪರ ಚಟುವಟಿಕೆಗಳಲ್ಲಿ ತೊಡಗಿರುವ ವಕೀಲರು ತಮ್ಮ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು. ಕೆಲಸದ ಒತ್ತಡದಿಂದ ಉಂಟಾಗಬಹುದಾದ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಕನಿಷ್ಠ ಮೂರು ತಿಂಗಳಿಗೊಮ್ಮೆಯಾದರೂ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ ಎಂದು ಮಾನ್ವಿಯ ಹಿರಿಯ ಶ್ರೇಣಿ ನ್ಯಾಯಾಧೀಶ ಕಂಚಿ ಮಾಯಣ್ಣ ಗೌತಮ್ ಸಲಹೆ ನೀಡಿದರು.

ಪಟ್ಟಣದ ವಕೀಲರ ಸಂಘ, ತಾಲೂಕು ಕಾನೂನು ಸೇವಾ ಪ್ರಾಧಿಕಾರ ಹಾಗೂ ಬೆಂಗಳೂರಿನ ಸ್ವಾಸ್ತ್ಯ ಆರೋಗ್ಯ ಕ್ಲಿನಿಕ್ ಸಹಯೋಗದಲ್ಲಿ ವಕೀಲರ ಸಂಘದ ಸದಸ್ಯರಿಗಾಗಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ಕಾನೂನಾತ್ಮಕ ಪರಿಹಾರ ಒದಗಿಸುವುದು, ಕಕ್ಷಿದಾರರ ಹಿತಾಸಕ್ತಿ ಕಾಪಾಡುವುದು ಹಾಗೂ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸುವಂತಹ ಹಲವು ಜವಾಬ್ದಾರಿಗಳನ್ನು ವಕೀಲರು ನಿರ್ವಹಿಸುತ್ತಾರೆ. ಈ ಕಾರ್ಯಗಳ ನಡುವೆ ವೈಯಕ್ತಿಕ ಆರೋಗ್ಯದ ಕಡೆ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ ಎಂದು ತಿಳಿಸಿದರು.

ದೈಹಿಕ ಹಾಗೂ ಮಾನಸಿಕ ಆರೋಗ್ಯ ಉತ್ತಮವಾಗಿದ್ದಾಗ ಮಾತ್ರ ವೃತ್ತಿಪರ ಕರ್ತವ್ಯಗಳನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಆದ್ದರಿಂದ ವಕೀಲರು ತಮ್ಮ ದಿನನಿತ್ಯದ ಕೆಲಸಗಳ ಜೊತೆಗೆ ಆರೋಗ್ಯ ರಕ್ಷಣೆಗೆ ಅಗತ್ಯ ಸಮಯ ಮೀಸಲಿಡಬೇಕು. ನಿಯಮಿತ ವೈದ್ಯಕೀಯ ತಪಾಸಣೆಯಿಂದ ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ ಸೂಕ್ತ ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ನ್ಯಾಯಾಧೀಶ ಕಂಚಿ ಮಾಯಣ್ಣ ಗೌತಮ್ ಅವರು ಸ್ವತಃ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಿವಿಲ್ ನ್ಯಾಯಾಧೀಶ ಆನಂದ್ ಕೊಣ್ಣೂರ್, ಮಾನ್ವಿ ವಕೀಲರ ಸಂಘದ ಅಧ್ಯಕ್ಷ ರವಿಕುಮಾರ್ ಪಾಟೀಲ್, ಉಪಾಧ್ಯಕ್ಷ ವಿಶ್ವನಾಥ್ ರಾಯಪ್ಪ, ಹಿರಿಯ ವಕೀಲರಾದ ಬಿ.ಕೆ. ಅಮರೇಶಪ್ಪ, ಅಯ್ಯಪ್ಪ ನಾಯಕ, ಶ್ರೀನಿವಾಸ್ ರಾವ್ ಕುಲಕರ್ಣಿ, ಡಿ. ರವಿಕುಮಾರ್, ಅರವಿಂದ್ ದೇಸಾಯಿ ಸೇರಿದಂತೆ ವಕೀಲರ ಸಂಘದ ಸದಸ್ಯರು ಹಾಗೂ ನ್ಯಾಯಾಲಯದ ಸಿಬ್ಬಂದಿ ಭಾಗವಹಿಸಿ ಉಚಿತ ಆರೋಗ್ಯ ತಪಾಸಣೆಯ ಸೌಲಭ್ಯ ಪಡೆದುಕೊಂಡರು.
ವರದಿ :ಆಂಜನೇಯ ನಸಲಾಪುರ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತರಗತಿಯಲ್ಲಿಯೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆತರಗತಿಯಲ್ಲಿಯೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಬಾಲಿವುಡ್ ನಟರಿಗೆ ಬೆದರಿಕೆ : ಬೆಂಗಳೂರಿನ ಟೆಕ್ಕಿ ಅರೆಸ್ಟ್ ಡೀಸೆಲ್ ಬೆಲೆ ಹೆಚ್ಚಾದಾಗ ಯಾರೂ ಮಾತನಾಡಲಿಲ್ಲ : ಡಿ. ಕೆ ಶಿವಕುಮಾರ್ ಅಗ್ನಿವೀರರ ಸೇವಾ ಅವಧಿ ಮತ್ತೆ 2 ವರ್ಷ ವಿಸ್ತರಣೆ : ಕೇಂದ್ರ ಅನುಮೋದನೆ ಕಬ್ಬಿನ ಬೆಳೆಗಾರರ ಸಂಧಾನ ಸಭೆಗಳು ವಿಫಲ : ಡಿಸಿ ಕಚೇರಿಗೆ ಬೀಗ ಹಾಕಲು‌ ಯತ್ನಿಸಿದ ರೈತರು ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಸುಲಭ ಜಯಅಸ್ಸಾಮ್ ವಿರುದ್ಧ ಕರ್ನಾಟಕಕ್ಕೆ ಇನ್ನಿಂಗ್ಸ್ 314 ರನ್ ಗಳ ದೊಡ್ಡ ಗೆಲುವು ಗೃಹಲಕ್ಷ್ಮಿಯರ 5 ಸಾವಿರ ಕೋಟಿ ರೂ. ಹಣ ಎಲ್ಲಿ ಹೋಯಿತು? : ನಿಖಿಲ್ ಕುಮಾರಸ್ವಾಮಿಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ನಿಯಮ ಅಪ್ರಸ್ತುತ