ಸೇಡಂ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಕೆ ಹೆಚ್ ಮುನಿಯಪ್ಪ ಅವರಿಗೆ ಎಸ್ ಸಿ ಕ್ಯಾಟೆಗರಿಯಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಲೆಂದು ಸೇಡಂ ಮತಕ್ಷೇತ್ರದ ಮಾದಿಗ ಸಮಾಜದ ಯುವ ಮುಖಂಡರಾದ ರಾಮು ಕಣೇಕಲ್ ಅವರು ಮನವಿ ಮಾಡಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು ಕೆ ಹೆಚ್ ಮುನಿಯಪ್ಪಯ ಅವರು ಕೋಲಾರ ಲೋಕಸಭಾ ಕ್ಷೇತ್ರದಿಂದ ಸತತ ಏಳು ಬಾರಿ (1991 ರಿಂದ 2019ರವರೆಗೆ) ಸಂಸದರಾಗಿ ಆಯ್ಕೆಯಾಗುವ ಮೂಲಕ ದಾಖಲೆ ನಿರ್ಮಿಸಿದರೆ.
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಸಂಪುಟದಲ್ಲಿ ಕೇಂದ್ರ ಸಚಿವರಾಗಿ (ಕೇಂದ್ರ ರೈಲ್ವೆಯ ರಾಜ್ಯ ಸಚಿವರು ಮತ್ತು ಆಹಾರ ಸಂಸ್ಕರಣಾ ಕೈಗಾರಿಕಾ ಸಚಿವರು) ಕಾರ್ಯನಿರ್ವಹಿಸಿದರೆ.
2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಷ್ಟೇ ಅಲ್ಲದೆ ರಾಜ್ಯ ಸರ್ಕಾರದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾಗಿದ್ದಾರೆ.
ಕೆ. ಎಚ್. ಮುನಿಯಪ್ಪನವರು ಕರ್ನಾಟಕದ ದಲಿತ ಸಮುದಾಯದ ಪ್ರಮುಖ ನಾಯಕರಾಗಿದ್ದು, ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಪ್ರಭಾವವನ್ನು ಹೊಂದಿದ್ದಾರೆ.
ಸಾಮಾಜಿಕ ನ್ಯಾಯದ ಪರವಾಗಿ ಧ್ವನಿಯಾಗಿರುವ ಮುನಿಯಪ್ಪ ಅವರಿಗೆ ಕಾಂಗ್ರೆಸ್ ವರಿಷ್ಠರು ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಮಾದಿಗ ಸಮಾಜದ ಮುಖಂಡ ರಾಮು ಕಣೇಕಲ್ ಅವರು ಒತ್ತಾಯಿಸಿದ್ದಾರೆ.
ವರದಿ :ವೆಂಕಟಪ್ಪ ಕೆ ಸುಗ್ಗಾಲ್


