Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೇಹಾ ಕೊಲೆಗಾರನಿಗೆ ಗಲ್ಲು ಶಿಕ್ಷೆಯಾಗಲಿ

Advertisement
ಅಥಣಿ:- ನಾಗರೀಕರ ಹಿತರಕ್ಷಣಾ ವೇದಿಕೆ ಮತ್ತು ವಿವಿಧ ಸಂಘಟನೆಗಳಿಂದ ಆಗ್ರಹ

ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ: ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ



ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಇಲ್ಲಿನ ನಾಗರಿಕ ಹಿತರಕ್ಷಣಾ ವೇದಿಕೆ, ತಾಲೂಕ ಜಂಗಮ ಸಮಾಜ, ವಿವಿಧ ಮಹಿಳಾ ಸಂಘಟನೆ, ಕನ್ನಡ ಪರ ಸಂಘಟನೆ ಮತ್ತು ಹಿಂದೂ ಪರಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪಟ್ಟಣದ ಬುಧವಾರಪೇಟೆದಿಂದ ಆರಂಭವಾದ ಬೃಹತ್ ಪ್ರತಿಭಟನಾ ಮೆರವಣಿಗೆ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರ್ಪಳಿ ನಿರ್ಮಿಸಿ ಜೇವರ್ಗಿ- ಸಂಕೇಶ್ವರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಶಹಜಾನ ಡೊಂಗರಗಾoವ ಮಾತನಾಡಿ ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾಳನ್ನು ಫಯಾಜ್ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿರುವುದು ಅತ್ಯಂತ ಹೀನ ಕೃತ್ಯವಾಗಿದೆ. ಇದು ರಾಜ್ಯದ ಜನತೆಯಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ ಹುಟ್ಟಿಸಿದ ಘಟನೆಯಾಗಿದೆ, ಕೊಲೆಗಾರನ ವಿರುದ್ಧ ಕಾನೂನಾತ್ಮಕವಾಗಿ ಅತ್ಯಂತ ಕಠಿಣ ಶಿಕ್ಷೆಗೆ ವಿಧಿಸಬೇಕು.

ಫಯಾಜ್ ಮಾಡಿರುವ ಹೀನ ಕೃತ್ಯಕ್ಕೆ ಇಡೀ ಮುಸ್ಲಿಂ ಸಮುದಾಯಕ್ಕೆ ಕೆಟ್ಟ ಹೆಸರು ಬರುವಂತಾಗಿದೆ. ಎಲ್ಲ ಸಮುದಾಯದ ಮುಖಂಡರು ಧರ್ಮ ಗುರುಗಳು ಸೂಕ್ತ ಮಾರ್ಗದರ್ಶನ ಮಾಡುವ ಮೂಲಕ ನಮ್ಮ ಮಕ್ಕಳಲ್ಲಿ ಒಳ್ಳೆಯ ಸಂಸ್ಕಾರ ಮತ್ತು ಮಾರ್ಗದರ್ಶನ ನೀಡುವುದು ಇಂದಿನ ಅಗತ್ಯವಾಗಿದೆ. ನಮ್ಮ ನಾಡಿನಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು. ರಾಜ್ಯ ಸರ್ಕಾರ ನಿಷ್ಪಕ್ಷಪಾತದಿಂದ ಈ ಘಟನೆಯ ಬಗ್ಗೆ ತನಿಖೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.

ಯುವ ಮುಖಂಡ ಚಿದಾನಂದ ಸವದಿ ಮಾತನಾಡಿ ವಿದ್ಯಾರ್ಥಿಯನ್ನು ಕಾಲೇಜು ಆವರಣದಲ್ಲಿ ಹತ್ಯೆ ಮಾಡಿರುವ ಕೃತ್ಯ ರಾಜ್ಯದ ಜನತೆಯನ್ನ ಬೆಚ್ಚಿಬಿಳಿಸಿದೆ. ಫಯಾಜ್ ಎಂಬ ಯುವಕ ನೇಹಾ ಎಂಬ ಯುವತಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವುದು ಖಂಡನೀಯ. ನೇಹಾ ಸಾವಿಗೆ ನ್ಯಾಯ ಸಿಗಬೇಕು. ಈ ನಿಟ್ಟಿನಲ್ಲಿ ಈಗಾಗಲೇ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಪ್ರಕರಣವನ್ನು ಸಿಐಡಿ ಗೆ ಒಪ್ಪಿಸಿದ್ದಾರೆ.

ವಿಶೇಷ ನ್ಯಾಯಾಲಯ ಸ್ಥಾಪಿಸಿ ಅಪರಾಧಿಗೆ ಕಠಿಣ ಶಿಕ್ಷೆ ನೀಡುವಲ್ಲಿ ಸರ್ಕಾರ ಮುಂದಾಗಿರುವದು ನಮ್ಮೆಲ್ಲರಿಗೆ ಸಮಾಧಾನ ತಂದಿದೆ. ಈ ಕೊಲೆ ಪ್ರಕರಣವನ್ನು ಯಾರು ರಾಜಕೀಯವಾಗಿ ಬಳಸಿಕೊಳ್ಳಬಾರದು. ಇಂದು ಅಥಣಿಯಲ್ಲಿ ನಡೆದ ಹೋರಾಟದಲ್ಲಿ ಪಕ್ಷಾತೀತ ಮತ್ತು ಜಾತ್ಯಾತೀತವಾಗಿ ಎಲ್ಲ ಸಮುದಾಯದವರು ಪಾಲ್ಗೊಳ್ಳುವ ಮೂಲಕ ವಿದ್ಯಾರ್ಥಿನಿ ನೇಹಾ ಕುಟುಂಬಕ್ಕೆ ನ್ಯಾಯ ದೊರಕಬೇಕೆಂದು ಹೋರಾಟ ಮಾಡಲಾಗುತ್ತಿದೆ ಸರ್ಕಾರ ಕೂಡಲೇ ತನಿಖೆಯನ್ನು ಚುರುಕು ಗೊಳಿಸಿ ಕೊನೆ ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಶೆಟ್ಟರ ಮಠದ ಶ್ರೀ ಮರುಳಸಿದ್ದ ಸ್ವಾಮೀಜಿ ಮಾತನಾಡಿ ಕಾಲೇಜ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ವೈಶಾಚಕವಾಗಿ ಕೊಲೆ ಮಾಡಿರುವ ಫಯಾಜ್ ಎಂಬತನನ್ನು ಸಾರ್ವಜನಿಕವಾಗಿ ಕಠಿಣ ಶಿಕ್ಷೆ ವಿಧಿಸಬೇಕು. ರಾಜ್ಯದಲ್ಲಿ ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿರುವುದರಿಂದ ರಾಜ್ಯ ಸರ್ಕಾರ ಕಠಿಣವಾದ ಕಾನೂನನ್ನ ರೂಪಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಉಮೇಶರಾವ ಬಂಟೋಡ್ಕರ, ಪ್ರಕಾಶ ಮಹಾಜನ, ಕರವೇ ಅಧ್ಯಕ್ಷ ಅಣ್ಣಾಸಾಬ ತೆಲಸಂಗ, ದಲಿತ ಮುಖಂಡ ಸಿದ್ದಾರ್ಥ ಸಿಂಗೆ, ಯುವ ಮುಖಂಡ , ಶಿವಕುಮಾರ ಸವದಿ. ಸಿ.ಎ ಇಟ್ನಾಳಮಠ ಮಾತನಾಡಿದರು. ನಂತರ ತಹಶೀಲ್ದಾರ್ ಕಾರ್ಯಾಲಯಕ್ಕೆ ತೆರಳಿ ಉಪತಹಶೀಲ್ದಾರ ಮಹದೇವ್ ಬಿರಾದಾರ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಿವಕುಮಾರ ತೆಲಸಂಗ, ಶರಣಯ್ಯ ವಸ್ತ್ರದ, ಜಗದೀಶ ಹಿರೇಮಠ, ಈರಣ್ಣ ಜಗದಾಳ ಮಠ,ಎಂ. ಡಿ ತೊದಲಬಾಗಿ, ಕಲ್ಲಪ್ಪ ಒಣ ಜೋಳ, ಸಂಜೀವ ತೆಲಸಂಗ, ಸಂಪತಕುಮಾರ ಶೆಟ್ಟಿ, ಸಂತೋಷ ಸಾವಡಕರ, ಜಗನ್ನಾಥ ಬಾಮನೆ, ಪಿಂಟು ಹಿರೇಮಠ, ರೋಹಿಣಿ ಯಾದವಾಡ, ಗೀತಾ ತೋರಿ, ರಾಜು ವಾಘಮೋರೆ, ನಟರಾಜ ಹಿರೇಮಠ ಸೇರಿದಂತೆ ಅನೇಕ ಮುಖಂಡರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಹೋರಾಟದಲ್ಲಿ ಪಾಲ್ಗೊಂಡಿದ್ದರು.

ವರದಿ. ರಾಜು. ಎಮ್. ವಾಘಮಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ