ಬೆಂಗಳೂರು: ಎಸ್ಐಆರ್ ಪ್ರಕ್ರಿಯೆ ಹಾಗೂ Form-7 ಅರ್ಜಿಗಳ ವಿಚಾರದಲ್ಲಿ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಡಿರುವ ಆರೋಪಗಳು ಅತ್ಯಂತ ಗಂಭೀರವಾಗಿವೆ.
ಅಹಿಂದ ವರ್ಗದ ಮತದಾರರು, ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ಮತಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಬಿಜೆಪಿ ಷಡ್ಯಂತ್ರ ರೂಪಿಸಿದೆ ಎಂದು ಮುಖ್ಯಮಂತ್ರಿಗಳು ಆರೋಪಿಸಿ ದ್ದಾರೆ.
ಇಂತಹ ಗಂಭೀರ ಆರೋಪವನ್ನು ಮುಖ್ಯಮಂತ್ರಿಗಳೇ ಮಾಡಿರುವುದರಿಂದ, ಅದನ್ನು ದಾಖಲೆಗಳ ಸಮೇತ ಸಾಬೀತುಪಡಿಸಬೇಕು.
ಇಲ್ಲವಾದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ(B Y Vijayendra) ಅವರು ಸವಾಲು ಹಾಕಿದರು.
ಮುಖ್ಯಮಂತ್ರಿಗಳು ಬಿಜೆಪಿ ವಿರುದ್ಧ 50 ಲಕ್ಷದಷ್ಟು ಮತದಾರರ ಹೆಸರುಗಳನ್ನು ತೆಗೆದು ಹಾಕುವ ಸಂಚು ನಡೆದಿದೆ ಎಂದು ಆರೋಪಿಸಿದ್ದಾರೆ. ಆದರೆ, ಈ ಆರೋಪಕ್ಕೆ ಪೂರಕವಾದ ಯಾವುದೇ ನಿಖರ ದಾಖಲೆ ಅಥವಾ ಸಾಕ್ಷ್ಯವನ್ನು ಅವರು ಸಾರ್ವಜನಿಕವಾಗಿ ಮುಂದಿಟ್ಟಿಲ್ಲ.


