Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಾಯುಕ್ತವೇ ತನಿಖೆ ನಡೆಸಲಿ : ಸಿದ್ದರಾಮಯ್ಯ ಬಿಗ್‌ ರಿಲೀಫ್‌

Advertisement
ಧಾರವಾಡ / ಬೆಂಗಳೂರು : ಸಿಎಂ ಸಿದ್ದರಾಮ್ಯಯ ಅವರ ಮುಡಾ ಹಗರಣದ ತನಿಖೆಯನ್ನು ಸಿಬಿಐ ಗೆ ವಹಿಸಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಲೋಕಾಯುಕ್ತವೆ ತನಿಖೆ ನಡೆಸಲಿ ಎಂದು ಧಾರವಾಡ ಕೋರ್ಟ್‌ ಸೂಚಿಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

ಲೋಕಾಯುಕ್ತ ರಾಜ್ಯ ಸರ್ಕಾರದ ಅಧೀನದಲ್ಲಿದೆ. ಅಲ್ಲದೇ ಪ್ರಕರಣದ ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅತ್ಯಂತ ಪ್ರಭಾವಿ ಸ್ಥಾನದಲ್ಲಿದ್ದಾರೆ.

ಹೀಗಾಗಿ ಪ್ರಕರಣದ ಮೇಲೆ ಅವರು ಪ್ರಭಾವ ಬೀರುವ ಸಾಧ್ಯತೆಯಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ದೂರುದಾರರಾದ ಸ್ನೇಹಮಯಿ ಕೃಷ್ಣ ಅವರು ಮನವಿ ಮಾಡಿಕೊಂಡಿದ್ದರು.

ಎರಡೂ ಬದಿಯ ಕಕ್ಷಿದಾರ ವಾದವನ್ನು ಆಲಿಸಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು. ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಹಾಗೂ ರಾಜ್ಯ ಸರ್ಕಾರದ ಪರವಾಗಿ ವಾದಿಸಿದ್ದ ವಕೀಲರು ಸ್ನೇಹಮಯಿ ಕೃಷ್ಣ ಅವರ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಹಿಂದೆ ಲೋಕಾಯುಕ್ತವನ್ನು ಸಮರ್ಥಿಸುತ್ತಿದ್ದ ದೂರುದಾರರು ಈಗ ಸಿಬಿಐ ತನಿಖೆ ಆಗ್ರಹಿಸುತ್ತಿದ್ದಾರೆ. ಲೋಕಾಯುಕ್ತ ರಾಜ್ಯ ಸರ್ಕಾರದ ಅಧೀನದಲ್ಲಿದ್ದರೂ ಸ್ವತಂತ್ರ್ಯ ತನಿಖಾ ಸಂಸ್ಥೆಯಾಗಿದೆ. ಕೇಂದ್ರ ಸರ್ಕಾರದ ಸಿಬಿಐ ತನಿಖೆಗೆ ಆಗ್ರಹಿಸುವುದು ಸರಿಯಲ್ಲ ಎಂದು ಹೇಳಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ