Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿನ ತೆಂಡೂಲ್ಕರ್ ಗೆ ಜೀವಮಾನ ಸಾಧನೆ ಪ್ರಶಸ್ತಿ

Advertisement
ನವದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

2013 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಮಾಸ್ಟರ್ ಬ್ಲಾಸ್ಟರ್ ತಮ್ಮ ವೃತ್ತಿ ಬದುಕಿನಲ್ಲಿ ಮುರಿಯಲಾಗದಂತಹ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ.ಈ ಹಿನ್ನಲೆ ತೆಂಡೂಲ್ಕರ್ ಅವರಿಗೆ 2024ರ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗಿದೆ.

ಟೀಂ ಇಂಡಿಯಾ ಪರ 200 ಟೆಸ್ಟ್ ಮತ್ತು 463 ಏಕದಿನ ಪಂದ್ಯಗಳಲ್ಲಿ ಆಡಿರುವ 51 ವರ್ಷದ ಸಚಿನ್, ನವೆಂಬರ್ 2013 ರಲ್ಲಿ 34,357 ಅಂತರರಾಷ್ಟ್ರೀಯ ರನ್ ಮತ್ತು 100 ಅಂತಾರಾಷ್ಟ್ರೀಯ ಶತಕಗಳೊಂದಿಗೆ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದರು.

ಇದೀಗ ಮುಂಬೈನಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆದಿರುವ ಕಾರ್ಯಕ್ರಮದಲ್ಲಿ ಸಚಿನ್ ತೆಂಡೂಲ್ಕರ್ ಅವರಿಗೆ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗಿದೆ. ಈ ಹಿಂದಿನ ವರ್ಷ ರವಿಶಾಸ್ತ್ರಿ ಮತ್ತು ಮಾಜಿ ಅನುಭವಿ ವಿಕೆಟ್‌ಕೀಪರ್ ಫಾರೂಕ್ ಇಂಜಿನಿಯರ್ ಕರ್ನಲ್ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ