ಲಂಡನ್: ಜೆಕ್ ರಿಪಬ್ಲಿಕ್‌ನ ೨೧ ಹರೆಯದ ಖ್ಯಾತ ಟೆನಿಸ್ ಆಟಗಾರ್ತಿ ಲಿಂಡಾ ನೊಸ್ಕೋವಾ ವಿಂಬಲ್ಡನ್ ಟೆನಿಸ್ ಪಂದ್ಯಾವಳಿಯ ಮಹಿಳೆಯರ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.
ಇAದಿಲ್ಲಿ ನಡೆದ ಮಹಿಳೆಯರ ಸಿಂಗಲ್ಸ್ ಫೈನಲ್‌ನಲ್ಲಿ ತಮ್ಮ ದೇಶದವರೇ ಆದ ಕೊರೊಲಿನಾ ಮುಚೋವಾ ವಿರುದ್ಧ ೬-೨, ೫-೭, ೬-೩ ರಿಂದ ಮೂರು ಸೆಟ್‌ಗಳ ಹೋರಾಟದಲ್ಲಿ ಗೆದ್ದು ಮೊದಲ ಬಾರಿಗೆ ವಿಂಬಲ್ಡನ್ ಸಿಂಗಲ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡರು.


