LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಪಡಿತರಕ್ಕೆ ʼಜಾತಿ ಪ್ರಮಾಣ ಪತ್ರʼ ಲಿಂಕ್‌ ಮಾಡುವುದು ಕಾನೂನು ಬಾಹಿರ : ಪ್ರಲ್ಹಾದ್ ಜೋಶಿ 

Advertisement

ನವದೆಹಲಿ: ಕರ್ನಾಟಕ ಸರ್ಕಾರ ಪಡಿತರಕ್ಕೆ ʼಜಾತಿ ಪ್ರಮಾಣ ಪತ್ರʼ ಲಿಂಕ್‌ ಮಾಡುವುದು ಕಾನೂನು ಬಾಹಿರವಾದ ಕ್ರಮವಾಗಿದ್ದು, ಈ ಬಗ್ಗೆ ಮಾಹಿತಿ ಪಡೆಯುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾಗಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಆಹಾರ ಭದ್ರತೆ ಒದಗಿಸುವಲ್ಲಿ ಯಾವುದೇ ʼಜಾತಿʼ ಲಿಂಕ್ ಮಾಡಲು ಸಾಧ್ಯವಿಲ್ಲ ಎಂದಿರುವ ಸಚಿವರು, ಕರ್ನಾಟಕ ಸರ್ಕಾರ ಪಡಿತರಕ್ಕೆ ʼಜಾತಿ ಪ್ರಮಾಣ ಪತ್ರʼವನ್ನು ಕಡ್ಡಾಯಗೊಳಿಸಿರುವ ಬಗ್ಗೆ ಸರ್ಕಾರದಿಂದ ಸ್ಪಷ್ಟನೆ ಕೇಳಿದ್ದಾರೆ.

ಕೇಂದ್ರ ಸರ್ಕಾರದ ʼಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆʼ (PMGKAY)ಯಡಿ ಪಡಿತರ ಪಡೆಯುವ ಫಲಾನುಭವಿಗಳಿಂದ ರಾಜ್ಯದಲ್ಲಿ ಜಾತಿ ಪ್ರಮಾಣ ಪತ್ರ ಕೇಳಲಾಗುತ್ತಿದೆ ಎಂಬ ವರದಿ ಹಿನ್ನೆಲೆಯಲ್ಲಿ ಪ್ರಲ್ಹಾದ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬರಿಗೂ ಆಹಾರ ಭದ್ರತೆ ಒದಗಿಸುವಲ್ಲಿ ಬದ್ಧತೆ ತೋರಿದೆ. ಯಾವುದೇ ಜಾತಿ, ಜನಾಂಗವೆಂದೆಣಿಸುತ್ತಿಲ್ಲ. ಆದರೆ ಕರ್ನಾಟಕದಲ್ಲಿ ಮಾತ್ರ ಪಡಿತರ ಪಡೆಯಲು ರಾಜ್ಯ ಸರ್ಕಾರ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿರುವುದು ನಿಜಕ್ಕೂ ದುರಂತವೇ ಸರಿ ಎಂದು ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ.

ಸಲ್ಲದ ನೀತಿ-ನಿಯಮ ಹೇರುವುದರ ಉದ್ದೇಶವೇನು:?

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ಅವರ ಆರ್ಥಿಕ ಸ್ಥಿತಿ ಮತ್ತು ಅರ್ಹತೆ ಆಧಾರದ ಮೇಲೆ ಯಾವುದೇ ತಾರತಮ್ಯವಿಲ್ಲದೆ ಆಹಾರ ಧಾನ್ಯ ಒದಗಿಸಲಾಗುತ್ತಿದೆ.

 ಆದರೆ, ರಾಜ್ಯದಲ್ಲಿ ಆಧಾರ್, ಬಯೋಮೆಟ್ರಿಕ್ ದೃಢೀಕರಣ ವ್ಯವಸ್ಥೆಗಳ ಯಶಸ್ವಿ ಏಕೀಕರಣದ ಹೊರತಾಗಿಯೂ ʼಜಾತಿ ಪ್ರಮಾಣ ಪತ್ರʼ ಕಡ್ಡಾಯಗೊಳಿಸುವುದರ ಹಿಂದಿನ ಉದ್ದೇಶವೇನು? ಎಂದು ಪ್ರಶ್ನಿಸಿದ್ದಾರೆ.

ದೇಶದ ಯಾವುದೇ ಭಾಗದಲ್ಲಿ ಅರ್ಹ ಫಲಾನುಭವಿಗಳಿಗೆ ಸಬ್ಸಿಡಿ ಆಹಾರ ಧಾನ್ಯ ಸುಲಭವಾಗಿ ಲಭ್ಯವಾಗುವಂತೆ ಕೇಂದ್ರ ಸರ್ಕಾರ ಈಗಾಗಲೇ ʼಒಂದು ರಾಷ್ಟ್ರ, ಒಂದು ಪಡಿತರ ಚೀಟಿ’ ಉಪಕ್ರಮವನ್ನು ಪರಿಚಯಿಸಿದೆ. ಹೀಗಿರುವಾಗ ಸ್ಥಳೀಯವಾಗಿ ಸಲ್ಲದ ನೀತಿ ನಿಯಮ ಹೇರುವುದು ʼಕಡುಬಡವರು ಪಡಿತರ ಪಡೆಯುವ ಆಶಯಕ್ಕೆ ವಿರುದ್ಧವಾಗಿದೆʼ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಆಹಾರಧಾನ್ಯಕ್ಕೆ ಆಡಳಿತಾತ್ಮಕ ಕ್ರಮ ಅಡ್ಡಿಯಾಗಬಾರದು:

ದೇಶವಾಸಿಗಳಿಗೆ, ಅರ್ಹ ಫಲಾನುಭವಿಗಳಿಗೆ ಯಾವುದೇ ಅಡೆತಡೆ ಇಲ್ಲದಂತೆ ಆಹಾರ ಭದ್ರತೆ ಪ್ರಯೋಜನ ಕಲ್ಪಿಸುವುದು ಎಲ್ಲಾ ಸರ್ಕಾರಗಳ ಪ್ರಥಮ ಆದ್ಯತೆಯಾಗಿರಬೇಕು ಎಂದಿರುವ ಸಚಿವ ಜೋಶಿ, ಸಮಾಜದ ಬಡ ಮತ್ತು ಅರ್ಹ ವರ್ಗಗಳಿಗೆ ಆಹಾರ ಧಾನ್ಯ ತಲುಪುವಲ್ಲಿ ಯಾವುದೇ ಆಡಳಿತಾತ್ಮಕ ಕ್ರಮಗಳು ಅಡ್ಡಿಯಾಗಬಾರದು ಎಂದು ರಾಜ್ಯ ಸರ್ಕಾರಕ್ಕೆ ಸೂಚ್ಯವಾಗಿ ಚಾಟಿ ಬೀಸಿದ್ದಾರೆ.

ಕರ್ನಾಟಕದಲ್ಲಿ ಪಡಿತರ ಯೋಜನೆಗೆ ಜಾತಿ ಲಿಂಕ್‌ ಮಾಡುತ್ತಿರುವ ಬಗ್ಗೆ ಸಂಪೂರ್ಣ ವಿವರ ಪಡೆಯಲು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಂದ ವಿವರಣೆ ಪಡೆಯಲು ಕಚೇರಿ ಉನ್ನತ ಅಧಿಕಾರಿಗಳಿಗೆ ನಿರ್ದೇಶಿಸಿದ್ದೇನೆ. 

ಪಿಡಿಎಸ್‌ನಲ್ಲಿ ಜಾತಿ ಪ್ರಮಾಣಪತ್ರ ಪಡೆಯುವುದು ಕಾನೂನುಬಾಹಿರ. ಮತ್ತಿದು ಸ್ಥಾಪಿತ ಮಾರ್ಗಸೂಚಿಗಳು ಮತ್ತು ಎಸ್‌ಒಪಿಗಳಿಗೆ ವಿರುದ್ಧವಾಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಆಕ್ಷೇಪಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ