LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಹಿಂದುಳಿದ ವರ್ಗಗಳ ಸಮುದಾಯದ ಸಾಲದ ಬಡ್ಡಿ ಮನ್ನಾ : ಸಂಪುಟ ಸಭೆ ಒಪ್ಪಿಗೆ

Advertisement

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ (Good News) ನೀಡಲಾಗಿದೆ. 

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ವಿವಿಧ ನಿಗಮಗಳಿಂದ ಸಾಲ ಪಡೆದಿದ್ದ ಫಲಾನುಭವಿಗಳ ಒಟ್ಟು ₹236.04 ಕೋಟಿ ಬಡ್ಡಿಯನ್ನು ಮನ್ನಾ ಮಾಡಲು ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ.

ಒಂದಾವರ್ತಿ ತೀರುವಳಿ (OTS) ಯೋಜನೆ ಜಾರಿ

ರಾಜ್ಯದ ಆಯವ್ಯಯದಲ್ಲಿ ಘೋಷಿಸಿದಂತೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ 7 ನಿಗಮಗಳು 2012-14ನೇ ಸಾಲಿನಿಂದ 2020-21ನೇ ಸಾಲಿನವರೆಗೆ ವಿವಿಧ ಯೋಜನೆಗಳಡಿ ಸಾಲವನ್ನು ನೀಡಿವೆ. 

ಈ ಅವಧಿಯಲ್ಲಿ ಸಾಲ ಪಡೆದ ಫಲಾನುಭವಿಗಳು ಸಾಲದ ಅಸಲನ್ನು ಪೂರ್ಣವಾಗಿ ಮರುಪಾವತಿ ಮಾಡಿದರೆ, ಅದರ ಮೇಲಿನ ಬಡ್ಡಿ ಮೊತ್ತವಾದ ಒಟ್ಟು ₹236.04 ಕೋಟಿ ರೂಪಾಯಿಗಳನ್ನು ಮನ್ನಾ ಮಾಡುವ 'ಒಂದಾವರ್ತಿ ತೀರುವಳಿ' ಯೋಜನೆಯನ್ನು ಜಾರಿಗೆ ತರಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST