
ಬಾಡ ಗ್ರಾಮ ಪಂಚಾಯಿತಿ ಅಧಿಕಾರಿ ರಾಮಕೃಷ್ಣಪ್ಪ ಗುಡಗೇರಿ ಕಚೇರಿ ಮೇಲೆ ಮತ್ತು ಧಾರವಾಡದ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆ ಮತ್ತು ಹಾವೇರಿ ಲೋಕಾಯುಕ್ತರ ಸಿಬ್ಬಂದಿ ಜಂಟಿ ಕಾರ್ಯಚರಣೆ ನಡೆಸಿದ್ದಾರೆ.
ಪಿಡಿಓ ರಾಮಕೃಷ್ಣಪ್ಪ ಗುಡಗೇರಿ ಮೇಲೆ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಸದ್ಯ ದಾಖಲಾತಿಗಳ ಪರಿಶೀಲನೆ ಕಾರ್ಯ ನಡೆದಿದ್ದು ಅಕ್ರಮಗಳ ಬಗ್ಗೆ ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಲಿದ್ದಾರೆ.
ವರದಿ : ರಮೇಶ್ ತಾಳಿಕೋಟಿ

