ಬೆಳಗಾವಿ: ಬೆಳಗಾವಿ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ದೂರಿನ ಹಿನ್ನೆಲೆಯಲ್ಲಿ ನಿಪ್ಪಾಣಿ ತಹಶೀಲ್ದಾರ್ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಿಪ್ಪಾಣಿ ತಹಶೀಲ್ದಾರ್ ಸುರೇಶ್ ಮುಂಜೆಗೆ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಸುರೇಶ್ ಅವರ ನಿಪ್ಪಾಣಿ ಪಟ್ಟಣದ ಮನೆ, ಅಥಣಿ ಪಟ್ಟಣದ ಮನೆ ಹಾಗೂ ಮೂಡಲಗಿ ಪಟ್ಟಣದಲ್ಲಿರುವ ಅವರ ಮಾವನ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ತಹಶೀಲ್ದಾರ್ ಸುರೇಶ್ ಅವರ ವಿರುದ್ಧ ಅಕ್ರಮ ಆಸ್ತಿಗಳಿಕೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಳಗಾವಿಯ ವಿವಿಧೆಡೆ ಇರುವ ಅವರ ಮನೆ ಹಾಗೂ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.


