ಮದ್ದೂರು: ಮದ್ದೂರು (Maddur ) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಡೆಂಟ್ ಶಿವರಾಜು ಅವರ ಮನೆ ಮೇಲೆ ಲೋಕಾಯುಕ್ತ (Lokayukta ) ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ.
ಮದ್ದೂರಿನಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಪರಿಶೀಲನೆ ನಡೆಸುತ್ತಿದ್ದಾರೆ.
ದಾಳಿಯ ವೇಳೆ ಅಧಿಕಾರಿಗಳು ಕಂಡ ದೃಶ್ಯ ಕಂಡು ದಂಗಾಗಿದ್ದಾರೆ. ಹಾಸ್ಟೆಲ್‌ನಲ್ಲಿರುವ ಬಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ತಲುಪಬೇಕಿದ್ದ ಸರ್ಕಾರಿ ಸವಲತ್ತುಗಳು, ಆಹಾರ ಧಾನ್ಯಗಳು ಹಾಗೂ ದಿನಬಳಕೆಯ ಅಗತ್ಯ ಸಾಮಗ್ರಿಗಳು ಅಧಿಕಾರಿಯ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿಟ್ಟಿರುವುದು ಪತ್ತೆಯಾಗಿದೆ.
ಇಷ್ಟೇ ಅಲ್ಲದೆ, ನಿವೃತ್ತ ಅಧಿಕಾರಿಯ ನಿವಾಸದಲ್ಲಿ ಅಪಾರ ಪ್ರಮಾಣದ ಮದ್ಯದ ಬಾಟಲಿಗಳು ಸಿಕ್ಕಿದ್ದು, ಇಡೀ ಮನೆಯನ್ನೇ 'ಮಿನಿ ಬಾರ್' ರೀತಿಯಲ್ಲಿ ಪರಿವರ್ತಿಸಿಕೊಂಡಿರುವುದು ಬಯಲಾಗಿದೆ. ವಿದ್ಯಾರ್ಥಿಗಳಿಗೆ ಸೇರಿದ ಸಾಮಗ್ರಿಗಳ ಜೊತೆಗೆ ಭಾರಿ ಪ್ರಮಾಣದ ಮದ್ಯ ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.


