Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆದಾಯಕ್ಕಿಂತ ಹೆಚ್ಚು ಆಸ್ತಿ : ಸಚಿವ ಜಮೀರ್ ಗೆ ಲೋಕಾಯುಕ್ತ ಸಮನ್ಸ್ 

Advertisement
ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಸಿಲುಕಿರುವ ಸಚಿವ ಜಮೀರ್ ಅಹ್ಮದ್​ ಖಾನ್​​ ಅವರಿಗೆ ಇದೀಗ ಲೋಕಾಯುಕ್ತ ಶಾಕ್ ನೀಡಿದೆ.

ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪ ಪ್ರಕರಣದಲ್ಲಿ ವಿಚಾರಣೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ಸಮನ್ಸ್ ನೀಡಿದ್ದಾರೆ.ಡಿ.3ರಂದು ಖುದ್ದು ವಿಚಾರಣೆ ಬರುವಂತೆ ಸಮನ್ಸ್​ ನಲ್ಲಿ ಉಲ್ಲೇಖಿಸಲಾಗಿದೆ.

IMA ಚಿಟ್‌ಫಂಡ್‌ ವಂಚನೆ ಪ್ರಕರಣದ ತನಿಖೆ ವೇಳೆ, IMA ಮತ್ತು ಜಮೀರ್‌ ಅವರ ನಡುವೆ ಹಣಕಾಸು ವ್ಯವಹಾರ ನಡೆದಿರುವುದರ ಬಗ್ಗೆ ED ಪತ್ತೆ ಹಚ್ಚಿತ್ತು.

ತದನಂತರದಲ್ಲಿ ಇನ್ನೂ ಹೆಚ್ಚಿನ ತನಿಖೆಗಾಗಿ (2021) ಜಮೀರ್ ಅವರಿಗೆ ಸಂಬಂಧಿಸಿ ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಆ ವೇಳೆ ಯಾವ ದಾಖಲೆಗಳೂ ಸಿಕ್ಕಿರಲ್ಲಿ. ಆದರೆ ಜಮೀರ್ ತಮ್ಮ ಆದಾಯಕ್ಕಿಂತ ಮೀರಿ ಹೆಚ್ಚು ಸ್ವತ್ತು ಹೊಂದಿದ್ದಾರೆ ಎಂಬುವುದು ಮೇಲ್ನೋಟಕ್ಕೆ ಪತ್ತೆಯಾಗಿತ್ತು.

ಈ ಕುರಿತಾಗಿ ACBಗೆ ಇ.ಡಿ ವಿವರಣಾತ್ಮಕ ವರದಿ ಒಪ್ಪಿಸಿ ತನಿಖೆಯ ಅಗತ್ಯ ಬಗ್ಗೆ ವಿವರಿಸಿತ್ತು. 2022ರ ಸೆಪ್ಟೆಂಬರ್‌ನಲ್ಲಿ ACB ರದ್ದಾದ ಕಾರಣದಿಂದಾಗಿ ಎಲ್ಲಾ ಕೇಸ್​​ಗಳು ಲೋಕಾಯುಕ್ತಕ್ಕೆ ವರ್ಗಾವಣೆಯಾಗಿದ್ದವು.

ಆಗಿನಿಂದ ಈ ಪ್ರಕರಣದಲ್ಲಿ ಮಹತ್ವದ ತನಿಖೆಯ ಬೆಳವಣಿಗೆ ಆಗದ ಕಾರಣ, ಈಗ ಮರುಜೀವ ಸಿಕ್ಕಿದೆ. ಆದ್ದರಿಂದ ಜಮೀರ್​ ಅವರಿಗೆ ಇಂದು ಲೋಕಾ ಸಮನ್ಸ್​​​ ನೀಡಿ ವಿಚಾರಣೆಗೆ ಬರಲು ಸೂಚಿಸಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್