Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲವ್ ಬ್ರೇಕಪ್ : ಯೂಟ್ಯೂಬರ್ ಕೋಮಾಲಿ ಆತ್ಮಹತ್ಯೆ 

Advertisement
ಹೈದರಾಬಾದ್: ತೆಲಂಗಾಣ ರಾಜಧಾನಿ ಹೈದರಾಬಾದ್‌ನ ರಾಯದುರ್ಗಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವ ಯೂಟ್ಯೂಬರ್ ಕೋಮಲಿ (21) ಆತ್ಮಹತ್ಯೆ ಮಾಡಿಕೊಂಡಿರುವುದು ತೀವ್ರ ಸಂಚಲನ ಮೂಡಿಸಿದೆ. ಮಣಿಕೊಂಡದ ಚಿತ್ರಪುರಿ ಕಾಲೋನಿಯಲ್ಲಿರುವ ಸಂಬಂಧಿಕರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅವರು ಪ್ರಾಣ ಕಳೆದುಕೊಂಡಿದ್ದಾರೆ.

ಮಲ್ಲಾರೆಡ್ಡಿ ವಿಶ್ವವಿದ್ಯಾನಿಲಯದಲ್ಲಿ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದ ಕೋಮಲಿ, ಸಾಫ್ಟ್‌ವೇರ್ ಉದ್ಯೋಗಿ ಹಾಗೂ ಮತ್ತೊಬ್ಬ ಯೂಟ್ಯೂಬರ್ ಅಖಿಲ್ ರೆಡ್ಡಿ ಎಂಬುವವರನ್ನು ಪ್ರೀತಿಸುತ್ತಿದ್ದರು. ಸುಮಾರು ಮೂರು ವರ್ಷಗಳ ಕಾಲ ಇವರ ಪ್ರೇಮ ಸಂಬಂಧ ಚೆನ್ನಾಗಿಯೇ ಇತ್ತು.

ಆದರೆ ವರ್ಷದ ಹಿಂದೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿ ಸಂಬಂಧ ಕಡಿದುಹೋಗಿತ್ತು (Breakup). ಇದರಿಂದಾಗಿ ಕೋಮಲಿ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಬ್ರೇಕಪ್ ನಂತರ ಅವರು ಈ ಹಿಂದೆ ಒಮ್ಮೆ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು, ಆದರೆ ಕುಟುಂಬಸ್ಥರು ಅವರನ್ನು ರಕ್ಷಿಸಿದ್ದರು. ಇತ್ತೀಚೆಗೆ ಮತ್ತೆ ಅಖಿಲ್ ಜೊತೆ ಸಂಭಾಷಣೆಯ ವೇಳೆ ಜಗಳ ನಡೆದಿದ್ದು, ಇದು ಈ ಕಠಿಣ ನಿರ್ಧಾರಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಕೊನೆಯ ಪೋಸ್ಟ್ ಆದ ತಿರುಮಲ ವಿಡಿಯೋ: ಕೋಮಲಿ ಅವರ ಲೈಫ್‌ಸ್ಟೈಲ್ ಮತ್ತು ಡೈಲಿ ವ್ಲಾಗ್‌ಗಳಿಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಅಭಿಮಾನಿಗಳಿದ್ದರು.

ತಮ್ಮ ವೈಯಕ್ತಿಕ ಇಚ್ಛೆಯೊಂದು ಈಡೇರಲಿ ಎಂದು ತಿರುಮಲ ಬೆಟ್ಟವನ್ನು ಹತ್ತುತ್ತಾ ಪ್ರತಿ ಮೆಟ್ಟಿಲಿಗೂ ಕುಂಕುಮ ಇಡುತ್ತಿರುವ ವಿಡಿಯೋವನ್ನು ಅವರು ಇತ್ತೀಚೆಗೆ ಪೋಸ್ಟ್ ಮಾಡಿದ್ದರು. ಅದೇ ಅವರ ಕೊನೆಯ ವಿಡಿಯೋ ಆಗಿದೆ.

ಪೊಲೀಸ್ ತನಿಖೆ: ರಾಯದುರ್ಗಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕೋಮಲಿ ಅವರ ಕುಟುಂಬ ಸದಸ್ಯರು ಮತ್ತು ಸ್ನೇಹಿತರನ್ನು ವಿಚಾರಣೆ ನಡೆಸುತ್ತಿದ್ದಾರೆ.

ಪ್ರೇಮ ವೈಫಲ್ಯದ ಜೊತೆಗೆ ಸೋಶಿಯಲ್ ಮೀಡಿಯಾ ಒತ್ತಡ ಅಥವಾ ಬೇರೆ ಯಾವುದಾದರೂ ಕಾರಣಗಳಿವೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್