Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೀತಿಗೆ ಪೋಷಕರು ವಿರೋಧ : ತಬ್ಬಿಕೊಂಡು ಪ್ರೇಮಿಗಳು ಆತ್ಮಹತ್ಯೆ 

Advertisement
ಆನೆಕಲ್​ : ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮನನೊಂದು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.ಒಬ್ಬರಿಗೊಬ್ಬರು ತಬ್ಬಿಕೊಂಡು ಮನೆಯ ಪ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ.

ತಮಿಳುನಾಡಿನ ಡೆಂಕಣಿಕೋಟೆಯ ಕೆಳಮಂಗಲ ಸಮೀಪದ ಗೌತಾಲಂ ಗ್ರಾಮದಲ್ಲಿ ಘಟನೆ ನಡೆದಿದೆ. ಗೌತಾಲಂ ಗ್ರಾಮದ ನರಸಿಂಹಮೂರ್ತಿ (22), ಬಾಚನಪ್ಪಟ್ಟಿ ಗ್ರಾಮದ ಯುವಶ್ರೀ (17) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.

ನರಸಿಂಹಮೂರ್ತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಯುವಶ್ರೀ ಕೃಷ್ಣಗಿರಿಯ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ನರಸಿಂಹ ಮೂರ್ತಿ ಹಾಗೂ ಯುವಶ್ರೀ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಪ್ರೀತಿಗೆ ಯುವಶ್ರೀ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ನರಸಿಂಹಮೂರ್ತಿ ಯುವಶ್ರೀಗೆ ಕಿರುಕುಳ ನೀಡುತ್ತಿದ್ದಾನೆಂದು ಯುವಶ್ರೀ ಪೋಷಕರು ಕಳೆದ ತಿಂಗಳು ಡೆಂಕಣಿಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ಪೋಕ್ಸೋ ಕಾಯ್ದೆಯಡಿ ನರಸಿಂಹಮೂರ್ತಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. 10‌ ದಿನಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ನರಸಿಂಹಮೂರ್ತಿ ಜೈಲಿನಿಂದ ಹೊರಬಂದಿದ್ದನು.

ನರಸಿಂಹಮೂರ್ತಿ ಜೈಲಿನಿಂದ ಹೊರಬಂದ ಬಳಿಕ ಯುವಶ್ರಿ ಜೊತೆ ಜೊತೆ ನಿರಂತರ ಫೋನ್​ನಲ್ಲಿ ಸಂಪರ್ಕ ಇದ್ದನು. ಯುವಶ್ರೀ ಶುಕ್ರವಾರ ಸಂಜೆ ಕಾಲೇಜು ಮುಗಿಸಿ ನರಸಿಂಹಮೂರ್ತಿ ಮನೆಗೆ ಹೋಗಿದ್ದಾಳೆ.

ಪ್ರೀತಿಗೆ ಪೋಷಕರು ವಿರೋಧ ಮಾಡುತ್ತಿರುವುದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಮನೆಯ ಬಾಗಿಲು ಹಾಕಿಕೊಂಡು ಒಬ್ಬರಿಗೊಬ್ಬರು ತಬ್ಬಿಕೊಂಡು ಇಬ್ಬರು ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಷ್ಟು ಹೊತ್ತಾದರೂ, ಮನೆಯ ಬಾಗಿಲು ತೆರೆಯದೆ ಇದ್ದಾಗ ಅನುಮಾನಗೊಂಡ ಯುವಕನ ಪೋಷಕರು ಬಾಗಿಲು ಮುರಿದು ಒಳ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಡೆಂಕಣಿಕೋಟೆ ಡಿವೈಎಸ್ಪಿ ಶಾಂತಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಡೆಂಕಣಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ