ಕಲಘಟಗಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2097 ನೇ ಮಧ್ಯವರ್ಜನ ಶಿಬಿರವು ತಾಲೂಕಿನ ಮಿಶ್ರಿಕೋಟಿ ಗ್ರಾಮದ ಜಿ. ಬಾಗಬಾನ್ ಫಂಕ್ಷನ್ ಹಾಲ್ ನಲ್ಲಿ ಅಗಸ್ಟ್ 1 ರಿಂದ 8 ರವರೆಗೆ ಜರುಗಲಿದೆ.
ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ಕಲಘಟಗಿ, ಜಿಲ್ಲಾ ಜನಜಾಗ್ರತಿ ವೇದಿಕೆ ಹಾಗೂ ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿಯ ಮಾರ್ಗದರ್ಶನ ದಲ್ಲಿ ಮಿಶ್ರಿಕೋಟಿ ಗ್ರಾಮದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ, ನವ ಜೀವನ ಸಮಿತಿ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮುತ್ತು ಗೌಡ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 1 ರ ಶನಿವಾರ ಬೆಳಗ್ಗೆ 11 ಗಂಟೆಗೆ ಮಾಜಿ ಸಚಿವ ಹಾಗೂ ಸ್ಥಳೀಯ ಶಾಸಕ ಸಂತೋಷ್ ಲಾಡ್ ಅವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಫ್.ಎಚ್. ಜಕ್ಕಪ್ಪನವರ, ಜನ ಜಾಗ್ರತಿ ವೇದಿಕೆ ಜಿಲ್ಲಾ ಸಮಿತಿ ಅಧ್ಯಕ್ಷ ವಸಂತ ಅರ್ಕಾಚಾರಿ, ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಹನುಮಂತ ನಾಯ್ಕ್ , ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿ ಪರಶುರಾಮ ಸಾವಂತ, ಸಿಪಿಐ ಶ್ರೀಶೈಲ್ ಕೌಜಲಗಿ ಸ್ವರ್ಣಗ್ರೂಪ್ ನ ಡಾ. ವಿ.ಎಸ್.ವಿ. ಪ್ರಸಾದ್, ಜಿ.ಪಂ. ಮಾಜಿ ಸದಸ್ಯ ಐ.ಸಿ. ಗೋಕುಲ್ ಸೇರಿದಂತೆ ಜನಜಾಗೃತಿ ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ಪ್ರಭಾಕರ ನಾಯಕ, ಎ.ವಿ. ಜಯರಾಮನವರ, ಬಸವರಾಜ ಬಿಡ್ನಾಳ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.
ತಾಲೂಕಿನ ನವಜೀವನ ಸಮಿತಿ, ಪೊಲೀಸ್ ಠಾಣೆ, ಪತ್ರಕರ್ತರ ಸಂಘ, ವಕೀಲರ ಸಂಘ, ಪ್ರಾಥಮಿಕ ಆರೋಗ್ಯ ಕೇಂದ್ರ, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರ ದೊಂದಿಗೆ ಜರುಗಲಿರುವ ಶಿಬಿರವು ಆಗಸ್ಟ್ 8 ರ ಶನಿವಾರ ಮಧ್ಯಾಹ್ನ 12 ಗಂಟೆಗೆ ಸಮಾರೋಪ ಗೊಳ್ಳಲಿದೆ. ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಪಾಲ್ಗೊಳ್ಳಲಿದ್ದು , ಮುಖ್ಯ ಅತಿಥಿಗಳಾಗಿ ಜನ ಜಾಗ್ರತಿ ವೇದಿಕೆಯ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ್ ಬಾದಾಮಿ, ನಿಕಟಪೂರ್ವ ಅಧ್ಯಕ್ಷ ರಾಜಣ್ಣ ಕೊರವಿ, ಪ್ರಾದೇಶಿಕ ನಿರ್ದೇಶಕಿ ಶ್ರೀಮತಿ ದಯಾಶೀಲ್, ತಹಶೀಲ್ದಾರ್ ಬಸವರಾಜ್ ಹೊಂಕಣದವರ, ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ, ಜಯರಾಜ ಹಡಗಲಿ, ಮಹಾವೀರ ಮಲಾನಿ, ಸುರೇಶ ಮರಲಿಂಗಣ್ಣವರ, ಧನಪಾಲ ಬೆಟದೂರ ಹಾಗೂ ಇನ್ನಿತರರು ಪಾಲ್ಗೊಳ್ಳಲಿರು ವುದಾಗಿ ತಾಲೂಕು ಯೋಜನಾಧಿಕಾರಿ ಚಂದ್ರಹಾಸ್ ನಾಯ್ಕ್, ಮಿಶ್ರೀಕೋಟಿ ವಲಯದ ಮೇಲ್ವಿಚಾರಕಿ ರೇಖಾ ನರಗುಂದ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


