LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಒಳ ಮೀಸಲಾತಿ ಜಾರಿ ಮಾಡುವ ಕುರಿತು ಮಾದಿಗ ದಂಡೋರ ಅಗ್ರಹ

Advertisement
ಗುರುಮಾಠಕಲ್ : ಗುರುಮಾಠಕಲ್ ತಾಲೂಕಿನ ಯಾದಗಿರಿ ಜಿಲ್ಲೆಯ ಜಿಲ್ಲಾ ಉಪಾಧ್ಯಕ್ಷ ಆಶಾನ್ನ ಬುದ್ಧ ಅವರು ಸುದ್ದಿಗರರೊಂದಿಗೆ ಮಾತನಾಡಿದರು.

ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡುವ ಕುರಿತು ನ್ಯಾ.ನಾಗಮೋಹನ್‌ದಾಸ್‌ ಆಯೋಗವು ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದೆ. ಶೇ.7ರಷ್ಟು ಮೀಸಲಾತಿ ಎಡಗೈ ಸಮುದಾಯಗಳಿಗೆ ದೊರತರೆ ನಮಗೆ ಸ್ವಲ್ಪ ಉಸಿರಾಡಲು ಅವಕಾಶ ಆಗಲಿದೆ ಎಂದು ಮಾದಿಗ ದಂಡೋರ ಜಿಲ್ಲಾ ಉಪಾಧ್ಯಕ್ಷ ಆಶಾನ್ನ ಬುದ್ಧ ಹೇಳಿದ್ದಾರೆ.

ಗುರುಮಾಠಕಲ್ ಪ್ರವಾಸಿ ಮಂದಿರದಲ್ಲಿ ಮಾತನಾಡಿದ MRPS ಉಪಾಧ್ಯಕ್ಷ ಮಾತನಾಡಿ ಕಳೆದ 30-35 ವರ್ಷಗಳಿಂದ ಮಾದಿಗ ಸಮುದಾಯಕ್ಕೆ ಸಿಗಬೇಕಿರುವ ಮೀಸಲಾತಿ ದೊರೆಯುತ್ತಿಲ್ಲ. ಸಫಾಯಿ ಕರ್ಮಚಾರಿ ಸೇರಿ ವಿವಿಧ ಕೂಲಿ ಕೆಲಸ ಮಾಡುತ್ತಿರುವ ಸಮುದಾಯಗಳಿಗೆ ಸರ್ಕಾರದಲ್ಲಿ ಸವಲತ್ತುಗಳು ದೊರೆಯುತ್ತಿಲ್ಲ ಎಂದರು.

ಹೀಗಾಗಿ ಒಳ ಮೀಸಲಾತಿ ಜಾರಿ ಆಗಬೇಕು ಎಂಬ ಹೋರಾಟ ಶುರುವಾಯಿತು. ಆ.1 ರಂದು ಸುಪ್ರೀಂ ಕೋರ್ಟ್‌ ಇದಕ್ಕೆ ಪೂರಕ ಆದೇಶ ಹೊರಡಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಗಮೋಹನ್‌ದಾಸ್ ಆಯೋಗ ರಚಿಸಿದರು. ಇದೀಗ ವರದಿ ಸಲ್ಲಿಕೆಯಾಗಿದ್ದು ಕುತೂಹಲ, ಆತಂಕ ಕಾಡುತ್ತಿದೆ ಎಂದು ಹೇಳಿದರು. ನ್ಯಾ.ಎ.ಜೆ. ಸದಾಶಿವ ಅವರು ಎಡಗೈ ಸಮುದಾಯಗಳಿಗೆ ಶೇ.6 ರಷ್ಟು ಮೀಸಲಾತಿ ಶಿಫಾರಸು ಮಾಡಿದ್ದರು. ಆಗ ಪರಿಶಿಷ್ಟ ಜಾತಿ ಮೀಸಲಾತಿ ಶೇ.15 ರಷ್ಟು ಇತ್ತು. ಈಗ ಮೀಸಲಾತಿ ಪ್ರಮಾಣ ಶೇ.17ಕ್ಕೆ ಹೆಚ್ಚಳ ಆಗಿದೆ. ಹೀಗಾಗಿ ಶೇ.7 ರಷ್ಟು ಆದರೂ ನೀಡಬೇಕು ಎಂಬುದು ನಮ್ಮ ಅಭಿಪ್ರಾಯ ಎಂದು ಮಾದಿಗ ದಂಡೊರ್ ಜಿಲ್ಲಾ ಉಪಾಧ್ಯಕ್ಷ ಆಶಾನ್ನ ಬುದ್ಧ ಹೇಳಿದರು.

ವರದಿ : ರವಿ ಬುರನೋಳ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ