Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾತ್ಮ ಜ್ಯೋತಿಬಾ ಫುಲೆ 199ನೇ ಜಯಂತಿ ಆಚರಣೆ: ರಸ್ತೆಗೆ ನಾಮಕರಣ

Advertisement
ಅಥಣಿ: ಪಟ್ಟಣದ ಮಹಾತ್ಮ ಜ್ಯೋತಿಬಾ ಫುಲೆ ವೃತ್ತದಲ್ಲಿ ಕ್ರಾಂತಿಸೂರ್ಯ ಮಹಾತ್ಮ ಜ್ಯೋತಿಬಾ ಫುಲೆ ಅವರ 199ನೇ ಜಯಂತಿಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು. ಇದೇ ಶುಭ ಸಂದರ್ಭದಲ್ಲಿ, ಪಟ್ಟಣದ ಶ್ರೀ ಬಸವೇಶ್ವರ ವೃತ್ತದಿಂದ ಜತ್ತ ರಸ್ತೆಯವರೆಗಿನ ಮಾರ್ಗಕ್ಕೆ "ಶ್ರೀ ಮಹಾತ್ಮ ಜ್ಯೋತಿಬಾ ಫುಲೆ ರಸ್ತೆ" ಎಂದು ಅಧಿಕೃತವಾಗಿ ನಾಮಕರಣ ಮಾಡಲಾಯಿತು. ಕಾರ್ಯಕ್ರಮದಲ್ಲಿ ನಾಮಫಲಕಗಳ ಉದ್ಘಾಟನೆ ಹಾಗೂ ವೃತ್ತದ ಕಟ್ಟಡದ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.
ಈ ಸಂಧರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರಾದ ಶ್ರೀ ಸದಾಶಿವ ಕೆ. ಬುಟಾಲಿ ಹಾಗೂ ಪುರಸಭೆ ಅಧ್ಯಕ್ಷರಾದ ಶ್ರೀಮತಿ ಶಿವಲೀಲಾ ಬುಟಾಲಿ ಅವರು ಕಾರ್ಯಕ್ರಮ ಉದ್ಘಾಟಿಸಿ, ಸನ್ಮಾನ ಸ್ವೀಕರಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಕ್ಷೇತ್ರದ ಶಾಸಕರು ಹಾಗೂ ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಲಕ್ಷ್ಮಣ ಸವದಿ ಅವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶೆಟ್ಟರ ಮಠದ ಪರಮ ಪೂಜ್ಯರು, ಪುರಸಭೆ ಸದಸ್ಯರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ನಗರದ ಪ್ರಮುಖ ಮುಖಂಡರು ಹಾಗೂ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ವರದಿ: -ಪ್ರಲ್ಹಾದ ವಾಘಮೋರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ