Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳಾ ಮಂಡಳ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Advertisement
ಬೆಳಗಾವಿ: ಗ್ರಾಮೀಣ ಕ್ಷೇತ್ರದ ಕುದ್ರೆಮನಿ ಗ್ರಾಮದಲ್ಲಿ ಘಟಸ್ಥಾಪನೆ ಹಾಗೂ ನವರಾತ್ರಿಯ ಶುಭಾರಂಭದ ಸಂದರ್ಭದಲ್ಲಿ ಶ್ರೀ ಲಕ್ಷ್ಮೀ ಮಹಿಳಾ ಮಂಡಳವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಉದ್ಘಾಟಿಸಿದರು.



ಹಿಂದೂ ಸಂಪ್ರದಾಯದ ಪ್ರಕಾರ ನವರಾತ್ರಿ ಹಬ್ಬಕ್ಕೆ ಬಹಳ ಮಹತ್ವವಿದ್ದು, ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಸೌಭಾಗ್ಯ ನನಗೆ ದೊರಕಿದ್ದು ಖುಷಿ ತಂದಿದೆ. ಈ ಸಂದರ್ಭದಲ್ಲಿ ಉದ್ಘಾಟನೆಗೊಂಡಿರುವ ಮಹಿಳಾ ಮಂಡಳಿ ಸಮಾಜಮುಖಿ ಕಾರ್ಯ ಮಾಡಲಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.



ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಪ್ರತಿವರ್ಷ ತೆರಳುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಭಕ್ತರಿಗೆ ಅಲ್ಲಿ ಸಕಲ ಸೌಲಭ್ಯ ಕಲ್ಪಿಸಲು ಪ್ರಯತ್ನಿಸುವುದಾಗಿ ಸಚಿವರು ಭರವಸೆ ನೀಡಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಎಲ್ಲೆಡೆ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದ್ದು, ಇನ್ನೂ ಹಲವಾರು ಯೋಜನೆಗಳನ್ನು ತರಲು ಪ್ರಯತ್ನಿಸುತ್ತಿದ್ದೇನೆ. ಎಲ್ಲರ ಆಶಿರ್ವಾದವಿರಲಿ ಎಂದು ಅವರು ಹೇಳಿದರು.



ಅರುಣ ದೇವನ್, ದೀಪಕ್ ಪಾಟೀಲ, ವೈಜು ರಾಜಗೋಳ್ಕರ್, ಸುರೇಶ ಪಾಟೀಲ, ವಿನಾಯಕ ಪಾಟೀಲ, ರವಿ ಪಾಟೀಲ, ಗೋಪಾಲ ಚೌಗುಲೆ, ರೋಹನ ಪಾಟೀಲ, ಜ್ಯೋತಿಬಾ ಬಡಸ್ಕರ್, ಶಿವಾಜಿ ಗುರವ್, ಬಾಳಾರಾಮ ಕದಂ, ನಾನಾ ಪಾಟೀಲ, ಶುಭಾಂಗಿ ರಾಜಗೋಳ್ಕರ್, ವಿಮಲ ಸಾಕ್ರೆ, ಲತಾ ಶಿವಾಂಗೆಕರ್ ಮುಂತಾದವರು ಉಪಸ್ಥಿತರಿದ್ದರು.
ವರದಿ ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ