ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮೂವರು ಅಭ್ಯರ್ಥಿಗಳು ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಎ ಐ ಸಿ ಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿ ಖಾನ್ ಹಾಗೂ ಪವನ್ ಖೇರಾ ಅವರುಗಳು ಕಾಂಗ್ರೆಸ್ ಅಭ್ಯರ್ಥಿಯಾಗಿ ಶುಕ್ರವಾರ ಚುನಾವಣಾಧಿಕಾರಿ ಹಾಗೂ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂದಿ, ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಸಿಸಿ ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ,ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣಜಿತ್ ಸಿಂಗ್ ಸುರ್ಜೆವಾಲ ಸೇರಿದಂತೆ ಸಚಿವರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಮೂರು ಅಭ್ಯರ್ಥಿಗಳು ತಲಾ ಎರಡು ಸೆಟ್ ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಎಂ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದಿಂದ ಎರಡನೇ ಬಾರಿಗೆ ರಾಜ್ಯಸಭೆ ಪ್ರವೇಶ ಮಾಡಿದರೆ, ಕೇಂದ್ರದ ಮಾಜಿ ಸಚಿವ ರಹಮಾನ್ ಖಾನ್ ಅವರ ಪತ್ರ ಮನ್ಸೂರ್ ಆಲಿಖಾನ್ ಮತ್ತು ಎಐಸಿಸಿ ರಾಷ್ಟ್ರೀಯ ವಕ್ತರ ಪವನ್ ಖೇರಾ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶ ಮಾಡಲಿದ್ದಾರೆ.


