LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಬುದ್ಧ, ಬಸವ, ಅಂಬೇಡ್ಕರ್, ದಲಿತ ಸಮುದಾಯ ನಿಂದಿಸಿದ್ದ ವ್ಯಕ್ತಿ ಅರೆಸ್ಟ್ 

Advertisement

ಮಂಡ್ಯ: ಬುದ್ಧ, ಬಸವ, ಡಾ.ಬಿ.ಆರ್. ಅಂಬೇಡ್ಕರ್ ಮತ್ತು ದಲಿತ ಸಮುದಾಯ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದ ವ್ಯಕ್ತಿಯನ್ನು ಮಂಡ್ಯ ಜಿಲ್ಲೆ ಕೆಆರ್ ಪೇಟೆ ಠಾಣೆ ಪೊಲೀಸರು  ಬಂಧಿಸಿದ್ದಾರೆ.

ವೇದಮೂರ್ತಿ ಬಂಧಿತ ಆರೋಪಿ. ಈತನ ವಿರುದ್ಧ ದಲಿತ ಮುಖಂಡರು ಕೆಆರ್ ಪೇಟೆ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದು, ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಸಮೀಪ ಆರೋಪಿಯನ್ನು ಬಂಧಿಸಿ ಕೆಆರ್ ಪೇಟೆ ಗ್ರಾಮಾಂತರ ಠಾಣೆಗೆ ಕರೆದುಕೊಂಡು ಬಂದಿದ್ದಾರೆ.

ವೇದಮೂರ್ತಿಯನ್ನು ಬಂಧಿಸಿದ ವಿಷಯ ತಿಳಿಯುತ್ತಲೇ ಪೊಲೀಸ್ ಠಾಣೆ ಎದುರು ಜಮಾವಣೆಗೊಂಡ ದಲಿತ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

ಆರೋಪಿ ವಿರುದ್ಧ ಪ್ರತಿಭಟನೆ ನಡೆಸಲಾಗಿದ್ದು, ಆತನನ್ನು ತಮ್ಮ ವಶಕ್ಕೆ ಒಪ್ಪಿಸಬೇಕೆಂದು ಒತ್ತಾಯಿಸಿದ್ದಾರೆ. ಇದರಿಂದಾಗಿ ಪೊಲೀಸ್ ಠಾಣೆ ಬಳಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಪೊಲೀಸರು ಆರೋಪಿಯನ್ನು ಮಂಡ್ಯಕ್ಕೆ ಕರೆದುಕೊಂಡು ಹೋಗಿದ್ದಾರೆ.

ಕೆಆರ್ ಪೇಟೆ ತಾಲೂಕಿನ ದೊಡ್ಡಯಾಚೇನಹಳ್ಳಿ ಗ್ರಾಮದ ವೇದಮೂರ್ತಿ ಎಂಜಿನಿಯರಿಂಗ್ ಪದವೀಧರ ಎಂದು ಹೇಳಿಕೊಂಡಿದ್ದಾನೆ.

ಏಳೆಂಟು ವರ್ಷ ಬೆಂಗಳೂರಿನಲ್ಲಿ ವಾಸವಾಗಿದ್ದ ಈತ ಬುದ್ಧ, ಬಸವ, ಅಂಬೇಡ್ಕರ್ ಸೇರಿದಂತೆ ಹಲವರ ವಿರುದ್ಧ ಆಕ್ಷೇಪಾರ್ಹ ಸರಣಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ. ಈತನ ವಿರುದ್ಧ ರಾಜ್ಯದ ವಿವಿಧೆಡೆ ಆಕ್ರೋಶ ವ್ಯಕ್ತವಾಗಿತ್ತು.

ಈತನನ್ನು ಬಂಧಿಸಬೇಕೆಂಬ ಒತ್ತಾಯ ಕೇಳಿ ಬಂದಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಕೆಆರ್ ಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ವೇದಮೂರ್ತಿಯನ್ನು ಬಂಧಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬರ ಪೀಡಿತ ಪ್ರದೇಶ ಎಂದು ಘೋಷಿಸಿ : ಶಾಸಕ ಶರಣಗೌಡ ಕಂದಕೂರ್ ಏಕಾಂಗಿ ಪ್ರತಿಭಟನೆ ಸರ್ಕಾರಿ ನಿವಾಸಕ್ಕಾಗಿ ಮಾಜಿ-ಹಾಲಿ ಮಂತ್ರಿಗಳ ಜಟಾಪಟಿ: ಮನೆ ಖಾಲಿ ಮಾಡಲು ಮಹದೇವಪ್ಪಗೆ ಬೈರತಿ ಸುರೇಶ್ ಒತ್ತಡಮೈಸೂರು ಸರಣಿ ಅಪಘಾತಗಳಿಗೆ ಬ್ರೇಕ್ ಹಾಕಲು ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ  ಶ್ರಾವಣ ಕೊನೆಯ ಸೋಮವಾರ ಸುಕ್ಷೇತ್ರ ದಕ್ಷಿಣ ಕಾಶಿ ಮಹಾಕೂಟ ನೂರಾರು ಭಕ್ತರು ಆಗಮನ ನಾನು ಶಾಲೆಯಲ್ಲಿಯೇ ಮುಖ್ಯಮಂತ್ರಿ ಆಗಿದ್ದೆ ; ಸಚಿವ ಸ್ಥಾನ ವಂಚಿತ ಶಾಸಕ ಆರ್ ಬಿ ತಿಮ್ಮಾಪೂರಬುದ್ಧ, ಬಸವ, ಅಂಬೇಡ್ಕರ್, ದಲಿತ ಸಮುದಾಯ ನಿಂದಿಸಿದ್ದ ವ್ಯಕ್ತಿ ಅರೆಸ್ಟ್ 20ರ ಊಟದಿಂದ ಆರಂಭವಾದ ಕಿಚನ್ : ಇಂದು ₹2.5 ಕೋಟಿ ವಹಿವಾಟಿನ ಅಮ್ಮಾ ಕಿಚನ್ವಿವಿಧ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಹಂಪನಗೌಡ ಬಾದರ್ಲಿ!ಇದು ವಿಶೇಷ ಗಣೇಶ್: ಮುಂಬೈನ ಜಿಎಸ್‌ಬಿ ಸೇವಾ ಮಂಡಲ ಗಣೇಶೋತ್ಸವಕ್ಕೆ ದಾಖಲೆಯ 703 ಕೋಟಿ ವಿಮೆ ಸಿಎ ಓದು ಅರ್ಧಕ್ಕೆ ಬಿಟ್ಟು ಬೆಣ್ಣೆ ದೋಸೆ ಮಾರಾಟಕ್ಕಿಳಿದ ಯುವಕ: ಈಗ ತಿಂಗಳಿಗೆ 12 ಲಕ್ಷ ರೂ. ಆದಾಯ