LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಂಗನವಾಡಿ ಕೇಂದ್ರಗಳು, ರಸಗೊಬ್ಬರ ವಿತರಣಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ : ಸಂತೋಷ ಲಾಡ್

Advertisement

ಕಲಘಟಗಿ: ರೈತರಿಗೆ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಒದಗಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಅಂಗನವಾಡಿ ಕೇಂದ್ರಗಳು, ರಸಗೊಬ್ಬರ ವಿತರಣಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ಸಂಪುಟ ದರ್ಜೆ ಸಚಿವರಾದ ಸಂತೋಷ ಲಾಡ್ ಅವರು ಸೂಚನೆ ನೀಡಿದರು. 

ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಯಲ್ಲಿ ಯಾವುದೇ ರೀತಿಯಲ್ಲಿ ಕೊರತೆಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ರಸಗೊಬ್ಬರ ವಿತರಣಾ ಕೇಂದ್ರಗಳಲ್ಲಿ ಮಾಹಿತಿವುಳ್ಳ ಫಲಕಗಳನ್ನು ಅಳವಡಿಸಬೇಕು. ಯಾವುದೇ ರೀತಿಯಲ್ಲಿ ಮಧ್ಯವರ್ತಿಗಳ ಹಾವಳಿಯನ್ನು ಹೊಂದಿರಬಾರದು. ರೈತರಿಗೆ ಸರಿಯಾದ ರೀತಿಯಲ್ಲಿ ಹಾಗೂ ಸಮರ್ಪಕವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ವಿತರಿಸಲು ಕ್ರಮ ವಹಿಸಬೇಕಾಗುತ್ತದೆ. ನಿಗದಿತ ದರಕ್ಕಿಂತ ಜಾಸ್ತಿ ದರಕ್ಕೆ ರಸಗೊಬ್ಬರವನ್ನು ವಿತರಣೆ ಮಾಡಬಾರದು ಎಂದು ತಿಳಿಸಿದರು. 

ಕಲಘಟಗಿ ತಾಲೂಕಿನಲ್ಲಿ ಶೇ. 85 ರಷ್ಟು ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದ್ದು, ಶೇ. 15 ರಷ್ಟು ಬೆಳೆ ಸಮೀಕ್ಷೆ ಕಾರ್ಯವು ಬಾಕಿ ಉಳಿದಿದೆ. ಆದಷ್ಟು ಬೇಗ ಬೆಳೆ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಬೇಕು. ಬೆಳೆ ದರ್ಶಕ ಆ್ಯಪ್‍ನಲ್ಲಿ ದಾಖಲು ಮಾಡುವ ಮಾಹಿತಿಯನ್ನು ಖಚಿತಪಡಿಸಿಕೊಳ್ಳಬೇಕು. ಯಾವುದೇ ರೀತಿಯಲ್ಲಿ ತಪ್ಪಾದ ಮಾಹಿತಿಯನ್ನು ದಾಖಲಿಸಬಾರದು. ರೈತರು ಸಹ ತಪ್ಪಾದ ಮಾಹಿತಿ ಕಂಡು ಬಂದಲ್ಲಿ ಸರಿಪಡಿಸಲು ಅಧಿಕಾರಿಗಳಿಗೆ ತಿಳಿಸಬೇಕು. ಹನಿ ನೀರಾವರಿ ವ್ಯವಸ್ಥೆ ಅಳವಡಿಸಿಕೊಳ್ಳಲು ರೈತರಿಗೆ ತಿಳುವಳಿಕೆ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. 

ರೈತರು ಅಡಿಕೆ ಬೆಳೆಯಲು ಮುಂದಾಗಲಿ:
ಕಲಘಟಗಿ ತಾಲೂಕಿನಲ್ಲಿರುವ ರೈತರು ಅಡಿಕೆ ಬೆಳೆಯನ್ನು ಬೆಳೆಯಲು ಮುಂದಾಗಬೇಕು. ಅಡಿಕೆ ಬೆಳೆ ನಡುವೆ ಬಾಳೆ ಬೆಳೆಯನ್ನು ಸಹ ಬೆಳೆಯಬಹುದು. ಈ ಕುರಿತು ರೈತರಲ್ಲಿ ಅಡಿಕೆ ಬೆಳೆ ಬೆಳೆಯುವ ಮಾಹಿತಿವುಳ್ಳ ಕರಪತ್ರಗಳನ್ನು ಹಂಚಬೇಕು. ಕಬ್ಬು, ಗೋವಿನಜೋಳ, ಕಾಳು ಮೆಣಸು ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯಲು ರೈತರು ಮುಂದಾಗಬೇಕು ಎಂದು ಸಚಿವರು ಹೇಳಿದರು.

ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಿ:
ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಕಲಘಟಗಿ ತಾಲೂಕಿನಲ್ಲಿರುವ ಸುಮಾರು 16 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದೆ. ಈಗಾಗಲೇ 11 ಗ್ರಾಮಗಳಲ್ಲಿ ಬೋರವೆಲ್ ಕೊರೆಸಲಾಗಿದೆ. ಅದರಲ್ಲಿ 8 ಬೋರವೆಲ್‍ಗಳಿಂದ ನೀರು ಸರಬರಾಜು ಮಾಡಲಾಗುತ್ತಿದೆ. ಉಳಿದ ಗ್ರಾಮಗಳಿಗೂ ಸಹ ಕುಡಿಯುವ ನೀರು ಒದಗಿಸಲಾಗುವುದು. ಕಲಘಟಗಿ ಪಟ್ಟಣಕ್ಕೆ ಅಗತ್ಯವಿರುವ ಕುಡಿಯುವ ನೀರನ್ನು ಬೆಣಚಿಕೆರೆಯಿಂದ ಪೂರೈಸಲಾಗುತ್ತಿದೆ. ಪೈಪ್ ಲೈನ್ ಸೋರಿಕೆ ಕುರಿತು ದೂರುಗಳು ಬಂದಿವೆ. ಅವುಗಳನ್ನು ಕೂಡಲೇ ಪರಿಹರಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದರು. 

ಶಾಲೆಗಳು, ಅಂಗನವಾಡಿ ಕೇಂದ್ರಗಳ ಕಟ್ಟಡ ದುರಸ್ತಿಗೆ ಕ್ರಮ ವಹಿಸಿ:
ಶಾಲೆಗಳು, ಅಂಗನವಾಡಿ ಕೇಂದ್ರಗಳ ಕಟ್ಟಡ ದುರಸ್ತಿಗೆ ಅಧಿಕಾರಿಗಳು ಕ್ರಮ ವಹಿಸಬೇಕು. ಬೀಳುವ ಹಂತದಲ್ಲಿರುವ ಕಟ್ಟಡಗಳ ಬಗ್ಗೆ ಮಾಹಿತಿ ಒದಗಿಸಬೇಕು. ದುರಸ್ತಿ ಇರುವ ಕಟ್ಟಡಗಳಲ್ಲಿ ವಿದ್ಯಾರ್ಥಿಗಳನ್ನು ಕೂರಿಸಬಾರದು. ಈ ಹಿಂದೆ ಕಲಘಟಗಿ ತಾಲೂಕಿನ ಸುಮಾರು 140 ಶಾಲೆಗಳು ಹಾಗೂ 22 ಅಂಗನವಾಡಿಗಳಿಗೆ ಮೇಲ್ಚಾವಣಿಗೆ ತಗಡು ಅಳವಡಿಸಲು ಸೂಚಿಸಲಾಗಿತ್ತು. ಕಲಘಟಗಿ ತಾಲೂಕು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 98.63 ರಷ್ಟು ಫಲಿತಾಂಶ ಪಡೆದು ಸಾಧನೆ ಮಾಡಿದೆ. ಅಲ್ಲದೆ 16 ಶಾಲೆಗಳು ಶೇ. 100 ರಷ್ಟು ಫಲಿತಾಂಶ ಪಡೆದಿವೆ. ನಿರಂತರ ಆ್ಯಪ್ ಮೂಲಕ ಶಾಲಾ ಮಕ್ಕಳ ಹಾಜರಾತಿಯನ್ನು ಮಾಡಲಾಗುತ್ತಿದೆ. ಕಲಿಕೆಯಲ್ಲಿ ಹಿಂದಿರುವ ಮಕ್ಕಳಿಗೆ ಪರೀಕ್ಷಾ ಕೈಪಿಡಿ ಮೂಲಕ ಹೆಚ್ಚು ಅಂಕ ಗಳಿಸಲು ಪೆÇ್ರೀತ್ಸಾಹಿಸಬೇಕು. ಕಲಘಟಗಿ ತಾಲೂಕಿನಲ್ಲಿ 210 ಅಂಗನವಾಡಿ ಕೇಂದ್ರಗಳಿವೆ. ಈಗಾಗಲೇ 18 ಅಂಗನವಾಡಿ ಕೇಂದ್ರಗಳನ್ನು ದುರಸ್ತಿಗೊಳಿಸಲಾಗಿದೆ. ಇನ್ನೂ 11 ಅಂಗನವಾಡಿ ಕೇಂದ್ರಗಳನ್ನು ದುರಸ್ತಿಗೊಳಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ತೆರಿಗೆ ವಸೂಲಾತಿಯಲ್ಲಿ ಕಲಘಟಗಿ ತಾಲೂಕು ಜಿಲ್ಲೆಯಲ್ಲಿ 2 ನೇ ಸ್ಥಾನ:
ತೆರಿಗೆ ವಸೂಲಾತಿಯಲ್ಲಿ ಕಲಘಟಗಿ ತಾಲೂಕು ಜಿಲ್ಲೆಯಲ್ಲಿ 2 ನೇ ಸ್ಥಾನ ಪಡೆದುಕೊಂಡಿದೆ. 20 ಗ್ರಾಮ ಪಂಚಾಯತಗಳು ಶೇ. 100 ರಷ್ಟು ತೆರಿಗೆ ವಸೂಲಾತಿ ಸಾಧನೆ ಮಾಡಿವೆ. 8 ಗ್ರಾಮ ಪಂಚಾಯತಗಳು ಶೇ. 90 ಕ್ಕಿಂತ ಹೆಚ್ಚು ತೆರಿಗೆ ವಸೂಲಾತಿ ಮಾಡಿವೆ. ಅಳ್ನಾವರ ತಾಲೂಕು ಮೊದಲ ಸ್ಥಾನದಲ್ಲಿದೆ ಎಂದು ತಿಳಿಸಿದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಮಾತನಾಡಿ, ವಿಬಿಜಿ ರಾಮಜೀ ಯೋಜನೆ ಮೂಲಕ ರೈತರು ಕೃಷಿ ಹೊಂಡ, ಹನಿ ನೀರಾವರಿ ವ್ಯವಸ್ಥೆ ಅಳವಡಿಸಿಕೊಳ್ಳಲು ಮುಂದಾಗಬೇಕು. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕು. ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳ ದುರಸ್ತಿ ಕುರಿತು ಮಾಹಿತಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. 

ಕಾರ್ಯಕ್ರಮದಲ್ಲಿ ತೆರಿಗೆ ವಸೂಲಾತಿಯಲ್ಲಿ ಸಾಧನೆ ಮಾಡಿದ ಗ್ರಾಮ ಪಂಚಾಯತ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು. ಸಚಿವರು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.

ಕಾರ್ಯಕ್ರಮದಲ್ಲಿ SP  ಗುಂಜನ್ ಆರ್ಯ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ಎಸ್.ಆರ್.ಪಾಟೀಲ, ಕಲಘಟಗಿ ತಾಲೂಕಿನ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಬಸವರಾಜ ಭಾವಕರ, ಕೆಸಿಸಿ ಬ್ಯಾಂಕಿನ ನಿರ್ದೇಶಕ ಮಂಜುನಾಥ ಮುರಳ್ಳಿ, ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ವಾಯ್ ಸಾವಂತ, ನಾಮನಿರ್ದೇಶಿತ ಸದಸ್ಯರುಗಳಾದ ಸರಸ್ವತಿ ಮಲಕನಕೊಪ್ಪ, ಯಲ್ಲಪ್ಪ ಹುಲಿಮನಿ, ಶಿವಾನಂದ ಗಾಣಿಗೇರ, ಜೈಲಾನಿ ಅಂಗಡಿ, ಗುರಲಿಂಗಪ್ಪ ಕಂಪ್ಲಿಕೊಪ್ಪ, ಮಂಜುನಾಥ ಬಾಗೋಡಿ,ಹರಿಶಂಕರ್ ಮಠದ,ಬಾಬು ಅಂಚಿಟಗೇರಿ, ಅಜ್ಮತ ಜಾಗೀರಹದಾರ,ಬಾಳು ಖಾನಾಪುರ, ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸಾಯಿ ಸುದರ್ಶನ ಡೌಟ್ಕ್ರಿಕೆಟರ್ ಜತೆ ಡೇಟಿಂಗ್ ವದಂತಿ ತಳ್ಳಿ ಹಾಕಿದ ನಟಿ ಮೃನಾಲ್ ಥಾಕೂರ್ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಸಚಿವರಿಗೆ ಮನವಿದೇವದತ್ತ ಪಡಿಕಲ್ ಸುಂದರ ಶತಕಕರಡಿ ದಾಳಿಗೆ ರೈತ ಬಲಿ ಯುಪಿಐ ಸೇವೆ ಸಂಪೂರ್ಣ ಉಚಿತ : ಯಾವುದೇ ರೀತಿಯ ವಹಿವಾಟು ಶುಲ್ಕ ಇರುವುದಿಲ್ಲಟಾಕ್ಸಿಕ್ ಟ್ರೈಲರ್ ಔಟ್ : ದ್ವಿ ಪಾತ್ರದಲ್ಲಿ ಮಿಂಚಿದ ಯಶ್, ಇಲ್ಲದೆ ಲಿಂಕ್ ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಪೋಕ್ಸೋ, ಬಾಲ್ಯವಿವಾಹ ನಿಷೇದ ಕಾಯಿದೆಗಳ ಜಾಗೃತಿ ಕಾರ್ಯಕ್ರಮಸಿಟ್ಟು ತ್ಯಾಗ ಮಾಡಿದ್ರೆ ಮುಂದೆ ಸಿಎಂ ಆಗ್ತೀಯಾ : ಸಚಿವ ವಿಜಯಾನಂದ ಕಾಶಪ್ಪನವರ್‌ಗೆ ಸಿದ್ದನಕೊಳ್ಳ ಶ್ರೀಗಳ ಸ್ಫೋಟಕ ಭವಿಷ್ಯಶೀಘ್ರದಲ್ಲೇ ಸಮಾನ ಮನಸ್ಕರ ಪಕ್ಷ ಸ್ಥಾಪನೆ : ಚೇತನ್ ಅಹಿಂಸಾ